ಭಟ್ಕಳ: ಪಶ್ಚಿಮ ಶಿಕ್ಷಕರ ಮತಕ್ಷೇತ್ರಗಳ ಮತದಾರರ ಹೆಸರನ್ನು ಸೇರಿಸಲು ಅರ್ಹ ಮತದಾರರು ತಮ್ಮ ಹೆಸರನ್ನು ಅರ್ಜಿ ನಮೂನೆ -೧೯ ರಲ್ಲಿ ಸೂಕ್ತ ದಾಖಲೆಗಳೊಂದಿಗೆ ತಹಸೀಲ್ದಾರ್ ಕಚೇರಿಯ ಚುನಾವಣಾ ಶಾಖೆಗೆ ಸಲ್ಲಿಸಬೇಕೆಂದು ಭಟ್ಕಳ ತಹಸೀಲ್ದಾರ್ ಎಸ್. ರವಿಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಿ ಜನವರಿ ೧೭ ರಂದು ಮತದಾರರ ಹಾಗೂ ಸಾರ್ವಜನಿಕರ ತಿಳುವಳಿಕೆಗಾಗಿ ಈಗಾಗಲೇ ಪ್ರಕಟಿಸಲಾಗಿದೆ. ಪ್ರಸ್ತುತ ಪ್ರಾದೇಶಿಕ ಆಯುಕ್ತರು ಬೆಳಗಾವಿ ವಿಭಾಗ, ಬೆಳಗಾವಿ ಅವರು ಹಾಗೂ ಜಿಲ್ಲಾಧಿಕಾರಿಗಳು ಉಲ್ಲೇಖಿತ ಪತ್ರಗಳಲ್ಲಿ ನೀಡಲಾದ ನಿರ್ದೇಶನಗಳನ್ವಯ ಪ್ರಸ್ತುತ ಮತದಾರರ ಪಟ್ಟಿಗಳ ನಿರಂತರ ಕಾಲೋಚಿತಗೊಳಿಸಲು ಪ್ರಜಾಪ್ರಾತಿನಿಧ್ಯ ಕಾಯ್ದೆ ೧೯೫೦ರ ಕಲಂ ೨೨ ಮತ್ತು ೨೩ ರಡಿ ಮತ್ತು ಭಾರತ ಚುನಾವಣಾ ಆಯೋಗವು ಹೊರಡಿಸಿದ ಮ್ಯಾನುವಲ್ ಆನ್ ಇಲೆಕ್ಟರಲ್ ರೋಲ್ – ಅಕ್ಟೋಬರ ೨೦೧೬ರ ಅಧ್ಯಾಯ ೧೨ ರಂತೆ ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಹೆಸರು ಸೇರ್ಪಡೆಗೆ ಅವಕಾಶಗಳಿದ್ದು, ಈ ಹಿನ್ನೆಲೆ ಪಶ್ಚಿಮ ಶಿಕ್ಷಕರ ಮತಕ್ಷೇತ್ರಗಳ ಮತದಾರರ ಹೆಸರನ್ನು ಸೇರಿಸಲು ಅರ್ಹ ಮತದಾರರು ತಮ್ಮ ಹೆಸರನ್ನು ಅರ್ಜಿ ನಮೂನೆ -೧೯ ರಲ್ಲಿ ಸೂಕ್ತ ದಾಖಲೆಗಳೊಂದಿಗೆ ತಹಸೀಲ್ದಾರ್ ಕಚೇರಿಯ ಚುನಾವಣಾ ಶಾಖೆಗೆ ಸಲ್ಲಿಸಬೇಕೆಂದು ಭಟ್ಕಳ ತಹಸೀಲ್ದಾರ್ ಎಸ್. ರವಿಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮೂನೆ ೧೯ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು — ಅನುಬಂಧ-೨ ಪ್ರಮಾಣ ಪತ್ರ (ಶೈಕ್ಷಣಿಕ ಸಂಸ್ಥೆಯ ಮುಖಂಡರಿAದ), ದೃಢೀಕೃತ ಮತದಾರರ ಗುರುತಿಸ ಚೀಟಿ ಪ್ರತಿ, ದೃಢೀಕೃತ ಆಧಾರ್ ಕಾರ್ಡ ಪ್ರತಿ, ಪಾಸಪೋರ್ಟ ಅಳತೆಯ ಭಾವಚಿತ್ರಗಳೊಂದಿಗೆ ಪ್ರಸ್ತುತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಎಲ್ಲಾ ಅರ್ಹ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment