ಯಲ್ಲಾಪುರ: ತಾಲೂಕಿನ ಕಿರವತ್ತಿಯಲ್ಲಿ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿಯೊಂದು ಕಂಟೈನರ್ ಮತ್ತು ಐಶರ್ ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಮನೆಯೊಂದಕ್ಕೆ ನುಗ್ಗಿ ಜಖಂಗೊಳಿಸಿದ ಘಟನೆ ನಡೆದಿದೆ.
ಕಿರವತ್ತಿಯ ಜಯಂತಿ ನಗರದ ತಿರುವಿನಲ್ಲಿ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಸರಕು ಹೊತ್ತು ಸಾಗುತ್ತಿದ್ದ ಬೆಂಗಳೂರು ನೋಂದಣಿ ಇರುವ ಲಾರಿಯೊಂದು
ನಿಯಂತ್ರಣ ತಪ್ಪಿ ಕಂಟೈನರ್ ಮತ್ತು ಐಶರ್ ಲಾರಿಗೆ ಡಿಕ್ಕಿ ಹೊಡೆದು ಜಯಂತಿ ನಗರದ ಫಕೀರಮ್ಮ ಎಂಬುವರ ಮನೆಗೆ ನುಗ್ಗಿದೆ. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ಎರಡು ದ್ವಿಚಕ್ರ ವಾಹನಗಳೂ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಜಖಂಗೊಂಡಿವೆ. ಅದೃಷ್ಟವಶಾತ್ ಮನೆಯ ಸದಸ್ಯರಿಗೆ ಯಾವುದೇ ತೊಂದರೆಯಾಗಿರುವುದಿಲ್ಲ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ
Leave a Comment