ಭಟ್ಕಳ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಫಲಾನೂಭವಿಗಳು ರೈತರು ಕಡ್ಡಾಯವಾಗಿ ಇ – ಕೆವೈಸಿ ಮಾಡಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕಿ ರಶ್ಮಿ ಶಹಪುರಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಈಗಾಗಲೇ ಅರ್ಹ ರೈತ ಫಲಾನುಭವಿಗಳಿಗೆ ನೀಡಲಾಗುತ್ತಿರುವ ಸಹಾಯಧನ ಕೇಂದ್ರ ಸರಕಾರದ ಯೋಜನೆಯಡಿಯಲ್ಲಿ ನೀಡಲಾಗುತ್ತಿದ್ದು ಮುಂದಿನ ಎಪ್ರಿಲ್ 22 ರಿಂದ ಜುಲೈ 22ರ ತನಕ ನೀಡುವ ಆರ್ಥಿಕ ನೆರವನ್ನು ಪಡೆಯಲು ಈ ಯೋಜನೆಯ ಪ್ರತಿಯೊಬ್ಬ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಕೊಳ್ಳಬೇಕು. ಎಂದು ಕೋರಿದ್ದಾರೆ.
ರೈತ ಫಲಾನುಭವಿಗಳು ಮಾರ್ಚ್ 31ರ ಒಳಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹರಿರುವ ತಾಲೂಕಿನ ಫಲಾನುಭವಿಗಳು ನಿಮ್ಮ ಹತ್ತಿರದ ಸಿ.ಎಸ್.ಸಿ ಕೇಂದ್ರ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಇಲ್ಲವೇ ಕೃಷಿ ಇಲಾಖೆಯ ಲಿಂಕ್ ಬಳಸಿಕೊಂಡು ಇ-ಕೆವೈಸಿ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
Leave a Comment