ಭಟ್ಕಳ : ತಾಲೂಕಿನ ಕೋಣಾರ ಗ್ರಾಮ ಪಂಚಾಯತ ವ್ಯಾಪ್ತಿಯ ಬೇಸೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳಡಿರುವ ಘಟನೆ ವರದಿಯಾಗಿದೆ.
ಯುವಕನನ್ನು ಮಂಜುನಾಥ ಸೋಮಯ್ಯ ಗೊಂಡ (29) ಎಂದು ಗುರುತಿಸಲಾಗಿದೆ. ಈತನು ತಮ್ಮ ಊರಿನಲ್ಲಿಯೇ ಕೂಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಬುಧವಾರ ತಮ್ಮ ಮನೆಯ ಹತ್ತಿರದಲ್ಲಿಯೇ ಇರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಶೀಲಿಸಿದ್ದಾರೆ.
Leave a Comment