ಹೊನ್ನಾವರ : ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ ನೇತ್ರತ್ವದಲ್ಲಿ ರಾಜ್ಯಾಧ್ಯಂತ ಡಿಜಿಟಲ್ ಸದಸ್ಯತ್ವ ಆಂದೋಲನ ವೇಗವಾಗಿ ಸಾಗುತ್ತಿದ್ದು, ಚಿಕ್ಕಪುಟ್ಟ ತಾಂತ್ರಿಕ ದೋಷವಿದ್ದಲ್ಲಿ ಅದನ್ನು ಪರಿಹರಿಸಿ ಸದಸ್ಯತ್ವ ಆಂದೋಲನವನ್ನು ಯಶಸ್ವಿಗೊಳಿಸುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಕರೆ ನೀಡಿದರು.

ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಚೀಪ್ ಎನ್‍ರೋಲರ್ ಮತ್ತು ಎನ್‍ರೋಲರ್‍ಗಳಿಗೆ ವಿಶೇಷ ತರಬೇತಿ ನೀಡಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಇದೇ ಮೊದಲನೇ ಬಾರಿ ಡಿಜಿಟಲ್ ಸದಸ್ಯತ್ವ ನೋಂದಣಿ ನಡೆಯುತ್ತಿದೆ ಎಂದರು.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಮಾತನಾಡಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಒಟ್ಟೂ 64 ಮತಗಟ್ಟೆಗಳಿದ್ದು, ಈಗಾಗಲೇ 128 ಡಿಜಿಟಲ್ ನೋಂದಣಿಕಾರರನ್ನು ಗುರುತಿಸಲಾಗಿದ್ದು, ಸುಮಾರು 12 ಮುಖ್ಯ ಡಿಜಿಟಲ್ ನೋಂದಣಿಕಾರರನ್ನು ನೇಮಿಸಲಾಗಿದೆ ಎಂದರು. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಸುಮಾರು 10 ಸಾವಿರ ಪ್ರಾಥಮಿಕ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದರು.
ಕೆ.ಪಿ.ಸಿ.ಸಿ. ಯಿಂದ ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ಗೆ ಉಸ್ತುವಾರಿ ಸಂಯೋಜಕರಾಗಿ ಆಗಮಿಸಿದ ಮಂಜುನಾಥ ನಾಯ್ಕ ಮಾತನಾಡಿ ರಾಜ್ಯಾದ್ಯಂತ ಸದಸ್ಯತ್ವ ನೋಂದಣಿ ಪ್ರಕ್ರಿಯೆ ಜಾರಿಯಲ್ಲಿದ್ದು, ಹೊನ್ನಾವರ ವ್ಯಾಪ್ತಿಯಲ್ಲಿ ಸದಸ್ಯತ್ವ ಆಂದೋಲನ ಪ್ರಗತಿಯಲ್ಲಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮಹೇಶ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಿಕ್ರಿಯಾ ಶೇಖ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೃಷ್ಣ ಹರಿಜನ, ಜಿಲ್ಲಾ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ಸಂತೋಷ ನಾಯ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಸಂದೇಶ ಶೆಟ್ಟಿ, ಪಕ್ಷದ ಮುಖಂಡರಾದ ಶ್ರೀಮತಿ ಆಶಾ ಮಡಿವಾಳ, ಮಹೇಶ ನಾಯ್ಕ, ಹನೀಫ್ ಶೇಖ್ ಇನ್ನು ಮುಂತಾದವರು ಉಪಸ್ಥಿತರಿದ್ದರು.
Leave a Comment