ಕಾರವಾರ : ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿಯಲ್ಲಿ 2022 – 23 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಸಿದ್ಧಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲಾವಧಿಯ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲಾವಧಿಯ ತೋಟಗಾರಿಕೆ ತರಬೇತಿ ನೀಡಲಾಗುತ್ತಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಬಯಸುವ ಅಭ್ಯರ್ಥಿಯು ಕನ್ನಡ ವಿಷಯದೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ, ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ತೋಟದ ಕೆಲಸಗಳನ್ನು ಮಾಡುವಷ್ಟು ದೃಢಕಾಯರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲಾಗುವುದು.
ಅಭ್ಯರ್ಥಿಯು ತರಬೇತಿ ಕೇಂದ್ರದಲ್ಲಿಯೇ ಇರಬೇಕು. ನಿಗದಿತ ಅರ್ಜಿ ನಮೂನೆಯನ್ನು ಮಾ. 15 ರಿಂದ ಏ. 16 ವರೆಗೆ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಹೊಸೊರು ಸಿದ್ಧಾಪುರ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಕಾರವಾರ ರವರ ಕಛೇರಿಯಲ್ಲಿ ಪಡೆಯಬಹುದು. ಅಲ್ಲದೇ ಇಲಾಖೆಯ ಜಾಲತಾಣ https://horticulturedir.karnataka.gov.in/ ನಲ್ಲಿ ಡೌನಲೋಡ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಏ. 16 ಕೊನೆಯ ದಿನವಾಗಿದೆ.
ಏ. 18 ರಂದು ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ)ಶಿರಸಿ ರವರ ಕಛೇರಿಯಲ್ಲಿ ಮುಂಜಾನೆ 11 ಗಂಟೆಗೆ ಎಲ್ಲ ಅಭ್ಯರ್ಥಿಗಳು ನೇರವಾಗಿ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಈ ಸಂಭಧವಾಗಿ ಈ ಕಚೇರಿಯಿಂದ ಮತ್ತೆ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ ಆಯಾ ತಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ರವರ ಕಚೇರಿಯಲ್ಲಿ ವಿಚಾರಿಸಬಹುದು ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Leave a Comment