ಹೊನ್ನಾವರ : ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತ, ಹಳದೀಪುರ ಗ್ರಾಮದ ಮೋಹನ ರಾಮ ಆಚಾರಿಯವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿಯವರ ಸೂಚನೆಯ ಮೇರೆಗೆ, ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ವಿಭಾಗದ ಅಧ್ಯಕ್ಷ ಆರ್.ಎಚ್. ನಾಯ್ಕ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ತಕ್ಷಣ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷತೆಯ ಜವಾಬ್ಧಾರಿನ್ನು ವಹಿಸಿಕೊಂಡು ಪಕ್ಷದ ತತ್ವ, ಸಿದ್ಧಾಂತ ಮತ್ತು ನೀತಿಗನುಗುಣವಾಗಿ ಎ.ಐ.ಸಿ.ಸಿ. ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರ ಮಾರ್ಗದರ್ಶನದಂತೆ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಆದೇಶ ಪತ್ರದಲ್ಲಿ ಹೇಳಲಾಗಿದೆ. ಇತ್ತಿಚೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರದಲ್ಲಿ ಏರ್ಪಡಿಸಿದ ಡಿಜಿಟಲ್ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಪಕ್ಷದ
ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಮತ್ತು ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿಯವರ ಸಮ್ಮುಖದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಆದೇಶ ಪತ್ರವನ್ನು ಮೋಹನ ರಾಮ ಆಚಾರಿಯವರಿಗೆ ನೀಡಿದರು.
Leave a Comment