• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪತ್ನಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

March 12, 2022 by Deepika Leave a Comment

ಗದಗ : ಎಂಬಿಎ ಪದವೀಧರ ಹಿಂದು ಯುವತಿ, ಆಟೋ ಚಾಲಕ ಅನ್ಯಧರ್ಮದ ವ್ಯಕ್ತಿ, ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ಸುಖಿ ಸಂಸಾರಕ್ಕೆ ಸಾಕ್ಷಿಯಾಗಿ ಒಂದು ಮಗು ಕೂಡಾ ಜನಿಸಿದೆ. ಆದರೆ, ಮಹಿಳೆಗೆ ತಾನು ಎರಡನೇ ಪತ್ನಿ ಎಂದು ಗೊತ್ತಾದ ಮೇಲೆ ವಿರಸ ಉಂಟಾಗಿ ವಿಚ್ಛೇದನಕ್ಕೆ ಬಂದು ನಿಂತಿದೆ.

ಪತ್ನಿ ತನ್ನಿಂದ ದೂರವಾಗಲು ನಿರ್ಧರಿಸಿದ್ದಾಳೆ. ಎಂದು ತಿಳಿದ ಪತಿ ಪತ್ನಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ ಘಟನೆ ನಗರದ ಮುಂಡರಗಿ ರಸ್ತೆಯಲ್ಲಿರುವ ಲಯನ್ಸ್ ಶಾಲಾ ಮೈದಾನದಲ್ಲಿ ಗುರುವಾರ ನಡೆದಿದೆ.

WhatsApp Image 2022 03 12 at 02.17.57

ಮೂಲತಃ ಗದಗ ನಗರದ ಹುಡೋ ಕಾಲನಿ ನಿವಾಸಿ ಅನಂತ ಪುರಾಣಿಕ ಹಾಗೂ ಅಶ್ವಿನಿ ಅವರ ಏಕೈಕ ಪುತ್ರಿ ಈ ಅಪೂರ್ವಾ ಹುಬ್ಬಳ್ಳಿಯಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಕೇಶ್ವಾಪುರದ ಆಟೋ ಚಾಲಕ ಇವಾಜ್ ಶಿರೂರ ಪರಿಚಯವಾಗಿದ್ದಾನೆ. ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರೂ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಇದಕ್ಕೆ ಅಪೂರ್ವಾ ಮನೆಯಲ್ಲಿ ವಿರೋಧ ವ್ಯಕ್ತವಾಗಿದೆ.

WhatsApp Image 2022 03 11 at 23.10.27

ಇದನ್ನು ಲೆಕ್ಕಿಸದೇ 2018ರಲ್ಲಿ ಮದುವೆಯಾಗಿದ್ದಾರೆ. ಮದುವೆ ನಂತರ ಅಪೂರ್ವಾ ಅವರ ಹೆಸರು ಅರ್ಫಾ ಬಾನು ಎಂದು ಇಟ್ಟುಕೊಂಡರು. ಆರಂಭದಲ್ಲಿ ಸುಖಿ ಸಂಸಾರವಿತ್ತು. ದಿನ ಕಳೆದಂತೆ ಪತಿಯ ಅಸಲಿ ಮುಖ ಗೊತ್ತಾಗಿದೆ. ಪತಿಗೆ ಈಗಾಗಲಿ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ. ಎಂಬ ಸಂಗತಿ ಬಯಲಾಗಿದೆ. ಇದರಿಂದ ಬೇಸತ್ತು ಪತಿಗೆ ವಿಚ್ಛೇದನ ನೀಡಬೇಕೆಂದು ನಿರ್ಧರಿಸಿ ನಾಲ್ಕು ತಿಂಗಳ ಹಿಂದೆ ಗದಗ ಹುಡೋದಲ್ಲಿರುವ ತವರು ಮನೆಗೆ ಬಂದಿದ್ದರು.

ಪತ್ನಿ ವಿಚ್ಛೇದನಕ್ಕೆ ಮುಂದಾಗಿದ್ದಾಳೆ ಎಂದು ಗೊತ್ತಾದ ಮೇಲೆ ಇಜಾಜ್ ಕೋಪಗೊಂಡಿದ್ದಾನೆ. ಗುರುವಾರ ಬೆಳಗ್ಗೆ ನಗರದ ಮುಂಡರಗಿ ರಸ್ತೆಯಲ್ಲಿರುವ ಲಯನ್ಸ್ ಶಾಲೆ ಮೈದಾನದಲ್ಲಿ ಸ್ಕೂಟಿ ಕಲಿಯಲು ಬಂದಿದ್ದ ಅಪೂರ್ವಾ ಮೇಲೆ ಇಜಾಜ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗದಗ ನಗರದ ಲಯನ್ಸ್ ಮೈದಾನದಲ್ಲಿ ಅಪೂರ್ವಾ ಮೇಲೆ ಪತಿ ಇಜಾಜ್ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ, ಅಪೂರ್ವಾ ಆರು ತಿಂಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗುವುದು.

ಶಿವ ಪ್ರಕಾಶ ದೇವರಾಜ ಎಸ್ಪಿ. ಗದಗ

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಪತ್ನಿ ಮೇಲೆ ಹಲ್ಲೆ, ಪತಿ ಆತ್ಮಹತ್ಯೆ
    Date
    August 20, 2021
  • ಮುಡೇಶ್ವರ ತೀರದಲ್ಲಿ ಅಂಗಡಿ ಇಡಲು ತಕರಾರು ವ್ಯಕ್ತಿಯ ಮೇಲೆ ಹಲ್ಲೆ ದೂರು ಪ್ರತಿ ದೂರು ದಾಖಲು
    Date
    January 11, 2021
  • ಪತಿಯಿಂದಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ
    Date
    July 4, 2022

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Karnataka News, Trending

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,038 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...