• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಿಲ್ಲೆಯಲ್ಲಿ 102 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ

March 14, 2022 by Deepika Leave a Comment

ಒಬ್ಬೊಬ್ಬರಿಗೆ ಎರಡರಿಂದ ಮೂರು ಫಿರ್ಕಾಗಳ ಕಾರ್ಯದಿಂದ ಒತ್ತಡ

ಶಿರಸಿ: ಜಿಲ್ಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಗೆ ಸಂಬAಧಿಸಿದ ಸಾರ್ವಜನಿಕರ ಕೆಲಸ ತೀರಾ ವಿಳಂಬವಾಗುತ್ತಿದೆ. ಜಿಲ್ಲೆಯಲ್ಲಿ 102 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ ಖಾಲಿಯಿದ್ದು ಒಬ್ಬೊಬ್ಬ ಗ್ರಾಮ ಲೆಕ್ಕಾಧಿಕಾರಿ ಎರಡು ಮೂರು ಫಿರ್ಕಾಗಳ ಕಾರ್ಯ ನಿರ್ವಹಿಸುವ ಒತ್ತಡಕ್ಕೆ ಸಿಲುಕಿದ್ದಾರೆ.

ಕಂದಾಯ ಇಲಾಖೆಯ ಕಂದಾಯ ವಸೂಲಿ, ಜಾತಿ, ಆದಾಯ ಪ್ರಮಾಣ ಪತ್ರಗಳನ್ನು ನೀಡುವ ಜವಾಬ್ದಾರಿ ಗ್ರಾಮ ಲೆಕ್ಕಿಗರದ್ದಾಗಿದೆ. ಜಿಲ್ಲೆಗೆ 337 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ಮಂಜೂರಾಗಿವೆ. 235 ಕಡೆಗಳಲ್ಲಿ ಗ್ರಾಮ ಲೆಕ್ಕಿಗರು ಇದ್ದಾರೆ. 102 ಹುದ್ದೆಗಳು ಖಾಲಿ ಇವೆ. ಇರುವ ಗ್ರಾಮಲೆಕ್ಕಿಗರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಶೇ. 35ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ಕಂದಾಯ ಇಲಾಖೆಯ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ.

ಎಂಬ ಆರೋಪ ಜನತೆಯದಾಗಿದೆ. ಅರಣ್ಯದಂಚಿನ ಗ್ರಾಮಗಳೇ ಹೆಚ್ಚು: ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಿರುವುದರಿಂದ ಎಲ್ಲ ತಾಲೂಕುಗಳಲ್ಲಿ ಹಲವು ಗ್ರಾಮಗಳು ಕಾಡಿನ ಅಂಚಿನಲ್ಲಿವೆ. ಅದರಲ್ಲೂ ದಾಂಡೇಲಿ, ಜೊಯಿಡಾ, ಯಲ್ಲಾಪುರ, ಶಿರಸಿ ತಾಲೂಕುಗಳ ಬಹುತೇಕ ಗ್ರಾಮಗಳು ಅರಣ್ಯದಂಚಿನಲ್ಲಿ ಇರುವುದರಿಂದ ಸರ್ಕಾರಿ ಯೋಜನೆಗಳು ಸಮರ್ಪಕ ರೀತಿಯಲ್ಲಿ ಜನರಿಗೆ ತಲುಪುತ್ತಿಲ್ಲ. ಇದಕ್ಕೆ ಇಲ್ಲಿ ಸಿಬ್ಬಂದಿ ಕೊರತೆ ಮುಖ್ಯ ಕಾರಣ.

ಕೆಲಸಗಳಿಗೆ ಅಲೆದಾಟ: ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಚೇರಿ ಎಂಬುದಿಲ್ಲ.ಕೆಲವರು ತಮ್ಮ ಫಿರ್ಕಾದ ಮಧ್ಯವರ್ತಿ ಸ್ಥಳದಲ್ಲಿ ಬಾಡಿಗೆ ಕಟ್ಟಡದಲ್ಲಿ ಕಚೇರಿ ಮಾಡಿಕೊಂಡು ವಾರದಲ್ಲಿ ಒಂದೋ ಎರಡೋ ದಿನ ಅಲ್ಲಿ ಲಭ್ಯರಿರುತ್ತಾರೆ. ಹಾಗಾಗಿ, ಇವರು ಸದಾ ಅಲ್ಲಿ ಜನರ ಕೈಗೆ ಸಿಗುವುದಿಲ್ಲ. ಹೋಬಳಿ ಕೇಂದ್ರ, ತಾಲೂಕು ಕೇಂದ್ರಗಳಲ್ಲಿ ಇವರ ಓಡಾಟ ಹೆಚ್ಚು. ಇವರನ್ನು ಭೇಟಿಯಾಗಬೇಕು ಎಂದರೆ, ಅಲ್ಲಿಗೇ ಹೋಗಬೇಕು. ಫೋನ್ ಮೂಲಕ ಸಂರ‍್ಕಿಸಿ, ಅವರು ಸಿಗುವ ಸ್ಥಳಗಳಿಗೆ ತೆರಳಿ ಕೆಲಸ ಮಾಡಿಸಿಕೊಳ್ಳಬೇಕು. ಜನನ ಮತ್ತು ಮರಣ ಪ್ರಮಾಣ ಪತ್ರ, ಬೆಳೆ ಪರಿಹಾರ, ಜಾತಿ ಆದಾಯ ಪ್ರಮಾಣ ಪತ್ರ, ವೃದ್ಧಾಪ್ಯ ಮತ್ತು ಅಂಗವಿಕಲರ ವೇತನ, ಸಂಧ್ಯಾ ಸುರಕ್ಷಾ, ಭೂಸ್ವಾಧೀನ ಮತ್ತು ಭೂ ಪರಿರ‍್ತನೆ ಮೊದಲಾದ ಕೆಲಸ ಮಾಡಿಸಿಕೊಳ್ಳಲು ಅಲೆದು ಅಲೆದು ಸಾಕಾಗುತ್ತದೆ ಎನ್ನುವುದು ಬಹುತೇಕ ಗ್ರಾಮಸ್ಥರ ಮಾತು.

ಪ್ರಸ್ತಾವನೆ ರವಾನೆ

ಜಿಲ್ಲೆಯಲ್ಲಿ 102 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇದೆ. ಆ ಗ್ರಾಮಗಳಲ್ಲಿ ಸರ್ಕಾರಿ ಕೆಲಸಕ್ಕೆ ತೊಂದರೆಯಾಗುವುದು ನಿಜ. ಹುದ್ದೆಗಳ ಭರ್ತಿಗಾಗಿ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆ ಅನುಮೋದನೆ ನಂತರವಷ್ಟೇ ಸ್ಥಾನ ಭರ್ತಿ ಮಾಡಲಾಗುವದು ಎಂಬುದು ಹಿರಿಯ ಅಧಿಕಾರಿಗಳ ಸಮಜಾಯಿಷಿಯಾಗಿದೆ. ಇನ್ನು ಗ್ರಾಮ ಲೆಕ್ಕಿಗರು ಗ್ರಾಮೀಣ ಭಾಗದಲ್ಲಿ ಮಹತ್ತರ ಜವಾಬ್ದಾರಿ ಹೊರುವ ಕಾರಣ ಆದಷ್ಟು ಶೀಘ್ರದಲ್ಲಿ ಎಲ್ಲರ ನೇಮಕಾತಿ ನಡೆಯಲಿ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಭಟ್ಕಳ ಕಂದಾಯ ಇಲಾಖೆಯ ಅಮಾಯಕ ನಿವೃತ್ತ ಗ್ರಾಮ ಸೇವಕ ಹುದ್ದೆಯಲ್ಲಿ ಮಹಾಮೋಸ’
    Date
    April 3, 2021
  • ಭರವಸೆಯ ಬೆಳಕಾದ ಕಂದಾಯ ಗ್ರಂಥಾಲಯ
    Date
    September 13, 2017
  • 102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ 41,162 ಅರ್ಜಿ !
    Date
    May 12, 2022

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Sirsi News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,117 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar