ಕಾರವಾರ: ದಿನೇ ಹೆಚ್ಚುತ್ತಿರುವು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಲಾಗಿರುವ ಬಡಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಡುಗೆ ಎಣ್ಣೆ ಬೆಲೆ ಏರಿಕೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
300 ಕೂಲಿ ಸಿಗುವುದೇ ಕಷ್ಟವಾಗಿರುವ ಇಂತಹ ಪರಿಸ್ಥಿತಿಯಲ್ಲಿ ಬಡವರು 200 ಕೊಟ್ಟು ಅಡುಗೆ ಎಣ್ಣೆ ಖರೀದಿಸಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ರಷ್ಯಾ ಉಕ್ರೇನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಲಾಭ ಮಾಡಿಕೊಳ್ಳಲು ಅಡುಗೆ ಎಣ್ಣೆಯನ್ನು ಅನಧಿಕೃತ ದಾಸ್ತಾನು ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂದು ಅವರು ಒತ್ತಾಯಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜನರಿಗೆ ಸರಿಯಾದ ಆದಾಯವಿಲ್ಲ ಮತ್ತು ಬಡವರ ದಿನಗೂಲಿಯೂ ಕಡಿಮೆ ಮೊತ್ತಕ್ಕೆ ಕುಸಿದಿದ್ದು, ಕುಟುಂಬ ಪಾಲನೆಗೆ ಪಡಬಾರದ ಕಷ್ಟಪಡುತ್ತಿದ್ದಾರೆ. ಇಂತಹ ಸಮಯದಲ್ಲಿ ಅಡುಗೆ ಎಣ್ಣೆ ಬೆಲೆ 200 ರೂ.ವರೆಗೆ ಏರಿಕೆ ಮಾಡಿದ್ದು. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಅಡುಗೆ ಎಣ್ಣೆ ಬೆಲೆ ಇಳಿಕೆ ಮಾಡಿ ಬಡವರ ಮಧ್ಯಮ ವರ್ಗದ ಜನರಿಗೆ ಆಸರೆಯಾಗಬೇಕಿದೆ ಎಂದು ಆಗ್ರಹಿಸಿದರು.
Leave a Comment