ಕಾರವಾರ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಸ್ಪೋಕನ್ ಇಂಗ್ಲೀಷ್ ಬೋಧನೆಗಾಗಿ ಡಿಇಡಿ, ಬಿಇಡಿ ತೇರ್ಗಡೆಯಾದ ಮಹಿಳಾ ಅಭ್ಯರ್ಥಿಗಳಿಗೆ ಮಾ.29ರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.30ರವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.
2020- 21ರ ಸಾಲಿನಲ್ಲಿ ಪಿಯುಸಿ ಗಣಿತ ವಿಷಯದೊಂದಿಗೆ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಹೆಚ್ಸಿಎಲ್ ಟೆಕ್ನಾಲಜಿ ಪ್ರೈ.ಲಿ.ನಲ್ಲಿ ಕೆಲಸದ ಅವಕಾಶವಿರುತ್ತದೆ. ಸಂದರ್ಶನದಲ್ಲಿ 4ರಿಂದ 5 ಕಂಪನಿಗಳು ಭಾಗವಹಿಸಲಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಜಿಎನ್ಎಮ್ ನರ್ಸಿಂಗ್, ಬಿಎಸ್ಸಿ ನರ್ಸಿಂಗ್ ತೇರ್ಗಡೆಯಾದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ರೆಗ್ಯೂಮ್, ಆಧಾರ್ ಕಾರ್ಡ್, ಇತ್ತೀಚಿನ ಭಾವಚಿತ್ರ ಪ್ರತಿಯೊಂದಿಗೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಖದ್ದಾಗಿ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಅಥವಾ ಕಛೇರಿ ದೂರವಾಣಿ ಸಂಖ್ಯೆ: 94814 03800, 08382- 226 386ಗೆ ಸಂಪರ್ಕಿಸಲು ಜಿಲ್ಲಾ ಯೋಜನಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment