ಯಲ್ಲಾಪುರ : ವಜ್ರಳ್ಳಿಗ್ರಾ.ಪಂಯ ಭಾಗ್ಯಶ್ರೀ ಸಂಜೀವಿನಿ ಗ್ರಾ.ಪಂ ಮಟ್ಟದ ಒಕ್ಕೂಟ ದ ಆಶ್ರಯದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ iec ಕಾರ್ಯಕ್ರಮದಡಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿಯ ಬಗ್ಗೆ ಸ್ವಸಹಾಯ ಸಂಘದ ಮೂಲಕ ಮನೆ ಮನೆಗೆ ಭೇಟಿ ನೀಡಿ ಅರಿವು ಮೂಡಿಸುವ ಮತ್ತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂತೋಷಿ ಬಂಟ. ಗ್ರಾ.ಪಂ ಕಾರ್ಯದರ್ಶಿಯವರಾದ ಜಿ.ಎಸ್.ಪತ್ರೇಕರ ಗ್ರಾ.ಪಂ ಮಟ್ಟದ ಒಕ್ಕೂಟದ ಪದಾಧಿಕಾರಿಗಳು, ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತ ಶರೀಫಾ ಬಿ ಮುಲ್ಲಾ. ಸ್ವ ಸಹಾಯ ಸಂಘಗಳ ಸದಸ್ಯರು ಈ ಜಾಥಾ ದಲ್ಲಿ ಪಾಲ್ಗೊಂಡಿದ್ದರು ..
Leave a Comment