ಶಿರಸಿ: ಇಲ್ಲಿನ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಚಂದ್ರ ನಾಯಕ ಅವರಿಗೆ 2022ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಲಭಿಸಿದೆ.
ಎ. 2ರಂದು ಪೊಲೀಸ್ ಧ್ವಜ ದಿನಾಚರಣೆಯಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಾಮಚಂದ್ರ ನಾಯಕ ಅವರು ಮೂಲತಃ ಅಂಕೋಲಾದ ಅಗ್ರಗೋಣದವರಾಗಿದ್ದಾರೆ. 2005ರಲ್ಲಿ ಪಿಎಸ್ಐ ಆಗಿ ಆಯ್ಕೆಯಾಗಿದ್ದು, ಮೈಸೂರಿನಲ್ಲಿ 1ವರ್ಷ ತರಬೇತಿ ಪಡೆದು ನಂತರ ಚಿಕ್ಕಮಗಳೂರು ಜಿಲ್ಲೆಯ ಕಡೂರು, ಕಳಸ, ಚಿಕ್ಕಮಗಳೂರಿನಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದಾರೆ.
2016ರಲ್ಲಿ ವೃತ್ತ ನಿರೀಕ್ಷರಾಗಿ ಆಗಿ ಪದೋನ್ನತಿ ಪಡೆದು ಕುಮಟಾದ ಕರಾವಳಿ ಕಾವಲು ಪಡೆ ಹಾಗೂ ಚಿಕ್ಕಮಗಳೂರಿನ ತರೀಕೆರೆಯಲ್ಲಿ ಹಾಗೂ ಉಡುಪಿಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕೆಲಸ ಮಾಡಿದ್ದಾರೆ. ನಂತರ ಶಿರಸಿಗೆ ಸಿಪಿಐ ಆಗಿ ಆಗಮಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Leave a Comment