ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿ ನಾಗರಾಜ ಭಟ್ಟ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿಯೋಗಿತಾದ ಅಲಂಕಾರ ಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಹಾಗೂ ಆದರ್ಶ ಭಟ್ಟ ಶ್ಲೋಕ ಅಂತ್ಯಾಕ್ಷರಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಅಧ್ಯಾಪಕವರ್ಗ ಸಂತಸ ವ್ಯಕ್ತಪಡಿಸಿದೆ.
Leave a Comment