ಕಾರವಾರ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ 11 ತಾಲೂಕಿನಲ್ಲಿ 16 ಅಂಗನವಾಡಿ ಕಾರ್ಯಕರ್ತೆ, 4 ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು 66 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಮೇ 11 ರೊಳಗೆ ಇಲಾಳಾ ವೆಬ್ ಸೈಟ್ https://anganwadirecruit.kar.nic.in/ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment