ಹೊನ್ನಾವರ ತಾಲೂಕಿನ ಕವಲಕ್ಕಿ ಸಮೀಪದ ಮಾಸುಕಲ್ಮಕ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೆ ಚಿರತೆಯೊಂದು ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಚಿರತೆ ಅಂದಾಜು ಒಂದು ವರ್ಷದ ಹೆಣ್ಣು ಚಿರತೆಯಾಗಿದೆ.
ಜಮೀನಿಗೆ ಕಾಡುಪ್ರಾಣಿಗಳ ಹಾವಳಿ ತಡೆಯಲೋ ಅಥವಾ ಕಾಡುಪ್ರಾಣಿ ಭೇಟೆಯಾಡಲೂ ತಂತಿಯಿಂದ ಸುತ್ತಿದ್ದ ನಳಿಕೆಗೆ ಚಿರತೆಯು ಸಿಲುಕಿ ಸಾವನ್ನಪ್ಪಿದೆ. ಸ್ಥಳಕ್ಕೆ ಡಿ.ಎಫ್.ಓ ರವಿಶಂಕರ್ ಹಾಗೂ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಗದ ಮಾಲೀಕತ್ವರ ಮಾಹಿತಿ ಪಡೆದು ತನಿಖೆ ನಡೆಸಿ ಪ್ರಕರಣ ದಾಖಲಿಸುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ತಾಲೂಕಿನ ಮುಗ್ವಾ, ಹೊಸಾಕುಳಿ, ಸಾಲ್ಕೋಡ್ ಭಾಗದಲ್ಲಿ ಈ ಹಿಂದೆ ಚಿರತೆ ಕಾಣಿಸಿಕೊಂಡಿತ್ತು. ಅಲ್ಲದೇ ನಾಯಿ ಆಕಳುಗಳನ್ನು ಭೇಟಿಯಾಡಿದೆ ಎಂದು ಕಾಡು ಪ್ರಾಣಿಗಳನ್ನು ನಿಯಂತ್ರಣ ಮಾಡುವಂತೆ ಸಾರ್ವಜನಿಕರು ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಇದೀಗ ಮರಿ ಚಿರತೆ ಮೃತಪಟ್ಟಿದ್ದರೂ ಸಾರ್ವಜನಿಕರಲ್ಲಿ ಆತಂಕ ದೂರವಾಗಿಲ್ಲ. ಅಧಿಕಾರಿಗಳು ಕಾಡಿನಿಂದ ನಾಡಿನತ್ತ ಮುಖ ಮಾಡುವ ಪ್ರಾಣಿಗಳನ್ನು ಪುನಃ ಕಾಡಿಗೆ ಕಳುಹಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.
Leave a Comment