ಶಿರಸಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ.
ಸುರೇಶ ಹೆಗಡೆ (53) ಆರೋಪಿಯಾಗಿದ್ದು, ಹಲವು ದಿನಗಳಿಂದ ವಿದ್ಯಾರ್ಥಿನಿಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದನು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಾಲಕರು ಶಿಕ್ಷಕನ ವಿರುದ್ಧ ದೂರನ್ನು ನೀಡಿದ್ದರು.
ಡಿಎಸ್ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯ್ಕ ಮಾರ್ಗದರ್ಶನದಲ್ಲಿ ಶಿಕ್ಷಕನನ್ನು ಬಂಧಿಸಿದ್ದಾರೆ. ಪೋಕ್ಸೊ ಪ್ರಕರಣದಡಿಯಲ್ಲಿ ಪಿಎಸ್ಐ ಈರಯ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Leave a Comment