ಹೊನ್ನಾವರ: ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ರಿಪೇರಿ ಹಾಗೂ ಹೊಸ ಮನೆಗಳ ನಿರ್ಮಾಣಕ್ಕೆ ಕರ್ನಾಟಕ ಸರಕಾರವು ಜಿಲ್ಲಾಡಳಿತಕ್ಕೆ ಸ್ಪಷ್ಟ ನಿರ್ದೇಶನ ನೀಡಿದ್ದಾಗಿಯೂ, ಅರಣ್ಯ ಸಿಬ್ಬಂದಿ ಸರಕಾರದ ನಿರ್ದೇಶನವನ್ನು ಉಲ್ಲಂಘಿಸಿ, ಅರಣ್ಯವಾಸಿಗಳಿಗೆ ಕಿರುಕುಳ ನೀಡುವ ಅರಣ್ಯ ಸಿಬ್ಬಂದಿಗಳ ಮೇಲೆ 7 ದಿನಗಳಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಅತೀ ಶೀಘ್ರದಲ್ಲಿ ಹೋನ್ನಾವರ ಡಿಎಫ್‌ಓ ಕಾರ್ಯಾಲಯಕ್ಕೆ ಅರಣ್ಯವಾಸಿಗಳು ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅರಣ್ಯ ಇಲಾಖೆಗೆ ಎಚ್ಚರಿಸಿದ್ದಾರೆ.
ಫೆಬ್ರವರಿ 22ರಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ, ಅರಣ್ಯ ಸಚಿವರು ಉಮೇಶ ಕತ್ತಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉಪಸ್ಥಿತಿಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಅರಣ್ಯ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಉಪಸ್ಥಿತಿಯಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯಿದೆಯ ಪರಿಣಾಮಕಾರಿ ಅನುಷ್ಟಾನದ ಕುರಿತು ಜರುಗಿದ ಸಭೆಯಲ್ಲಿ ತೆಗೆದುಕೊಂಡ ಸಭೆಯ ನಡುವಳಿಕೆಗೆ ವ್ಯತಿರಿಕ್ತವಾಗಿ ಅರಣ್ಯ ಸಿಬ್ಬಂದಿಗಳು ಕಾರ್ಯನಿರ್ವಹಿಸುವುದಕ್ಕೆ,

ಅರಣ್ಯವಾಸಿಗಳಿಗೆ ನ್ಯಾಯ ಕೊಡುವ ಹಾಗೂ ಅರಣ್ಯ ಸಿಬ್ಬಂದಿಗಳು ಸರಕಾರದ ನಿರ್ದೇಶನ ಉಲ್ಲಂಘಿಸಿರುವುದನ್ನು ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಅರಣ್ಯ ಕಛೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರಕಾರವು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ರಿಪೇರಿ ಹಾಗೂ ಹೊಸ ಮನೆಗಳ ನಿರ್ಮಾಣಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಹಾಗೂ ಮನೆಗಳ ರಿಪೇರಿಗೆ ಅರಣ್ಯ ಇಲಾಖೆ ಅಡ್ಡಿಪಡಿಸದಂತೆ ಕ್ರಮ ವಹಿಸುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾಗಿಯೂ ಅನಾವಶ್ಯಕವಾಗಿ ಅರಣ್ಯ ಸಿಬ್ಬಂದಿಗಳು ಅರಣ್ಯವಾಸಿಗಳಿಗೆ ಕಿರುಕುಳ ನೀಡುತ್ತಿರುವುದು ಖಂಡನಾರ್ಹ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಅರಣ್ಯ ಸಿಬ್ಬಂದಿಗಳಿAದ ಉಂಟಾಗುತ್ತಿರುವ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶ್ರೀಮಂತ ಅರಣ್ಯವಾಸಿಗಳಿಗೆ ಸವಲತ್ತು ನೀಡುವ ಹಾಗೂ ಬಡ ಅತಿಕ್ರಮಣದಾರರಿಗೆ ಅರಣ್ಯ ಸಿಬ್ಬಂದಿಗಳು ನಡೆಸುತ್ತಿರುವ ಕಾರ್ಯ ಖಂಡನಾರ್ಹ. ಇದ್ದವರಿಗೆ ಒಂದು, ಇಲ್ಲದವರಿಗೆ ಇನ್ನೊಂದು ಮಾಡುವ ಅರಣ್ಯ ಸಿಬ್ಬಂದಿಗಳ ನೀತಿ ಆಕ್ಷೇಪನಾರ್ಹ.
ರವೀಂದ್ರ ನಾಯ್ಕ, ಅರಣ್ಯ ಭೂಮಿ ಹಕ್ಕು ಅರಣ್ಯ ಸಿಬ್ಬಂದಿಗಳು ಕಾರ್ಯನಿರ್ವಹಿಸುವುದಕ್ಕೆ, ಹೋರಾಟಗಾರರ ವೇದಿಕೆ ಅಧ್ಯಕ್ಷ
Leave a Comment