ಗೋಕರ್ಣ: ಗೋಕರ್ಣ ಸಮೀಪದ ಜಟಾಯು ತೀರ್ಥದ ಬಳಿ ಅಪರಿಚಿತ ವ್ಯಕ್ತಿಯೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮುಂಡವಿಲ್ಲದ ಪುರುಷನ ಮೃತದೇಹ ಗುರುವಾರ ಬೆಳಿಗ್ಗೆ ಸಮುದ್ರದ ದಡದಲ್ಲಿ ಕೊಳೆತ ಸ್ಥಿತಿಯಲ್ಲಿ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಗೋಕರ್ಣ ಠಾಣೆಯ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ಮೆಲಕ್ಕೆತ್ತಿ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ಸಾಗಿಸಿದ್ದಾರೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment