ಭಟ್ಕಳ : ಟೆಕ್ ಸಾಕ್ ಬೆಂಗಳೂರು, ಸಿಡಾಕ್ ಧಾರವಾಡ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮುಡೇಶ್ವರದ ಆರ್.ಎನ್.ಎಸ್. ರೂರಲ್ ಪಾಲಿಟೆಕ್ನಿಕ್ ನಲ್ಲಿ ಒಂದು ದಿನದ ಉದ್ಯಮಶೀಲತಾ ಅಭಿವೃದ್ಧಿ ಮಾಹಿತಿ ಶಿಬಿರವನ್ನು ಏ. 26 ರಂದು ಮಂಗಳವಾರ ಬೆಳಿಗ್ಗೆ 9.30 ರಿಂದ ಸಂಜೆ ನಾಲ್ಕ ಗಂಟೆಗೆ ಜರುಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
18 ರಿಂದ 45 ವಯಸ್ಸಿನ ಹತ್ತನೇ ತರಗತಿ, ಡಿಪ್ಲೋಮ, ಐಟಿಐ, ಪಿಯುಸು ಅಥವಾ ಪದವಿ ಪಾಸ್ ಅಥವಾ ಫೇಲಾದ ಸ್ವ ಉದೋಗ ಮಾಡಲು ಆಸಕ್ತಿ ಇರುವ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಆಧಾರ ಪ್ರತಿ ಹಾಗೂ ಭಾವಚಿತ್ರಗಳನ್ನು ಏಪ್ರಿಲ್ 25 ರೊಳಗೆ ನೀಡಿ ಹೆಸರು ನೋಂದಾಯಿಸಿಕೊಳ್ಳಲು ಕೋರಿದ್ದಾರೆ.
ಶಿಬಿರದಲ್ಲಿ ದಕ್ಷಿಣ ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಬಾಳೇರಿ ಭಾಗವಹಿಸುತ್ತಿದ್ದಾರೆ. ಹಾಗೂ ಶಿಬಿರದಲ್ಲಿ ಸರಕಾರ ರಾಷ್ಟçಕೃತ ಬ್ಯಾಂಕುಗಳಿAದ ಸ್ವುದ್ಯೋಗಕ್ಕೆ ಬೇಕಾದ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಗುವುದು. ಶಿಬಿರದಲ್ಲಿ 35 ಜನ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುವುದರಿಂದ ಪ್ರಥಮ ಬಂದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಹೆಚ್ಚಿನ ಮಾಹಿತಿಗಾಗಿ ಕೆ. ಮರಿಸ್ವಾಮಿ ಮೊ.ನಂ 9448235284 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Leave a Comment