ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ಅಪರ ಆಯುಕ್ತರ ವ್ಯಾಪ್ತಿಯಲ್ಲಿನ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿವೃತ್ತಿ, ನಿಧನ, ರಾಜಿನಾಮೆ ಮತ್ತಿತರ ಕಾರಣಗಳಿಂದ 2015ರ ಡಿಸೆಂಬರ್ ಅಂತ್ಯಕ್ಕೆ ಖಾಲಿಯಾಗಿರುವ 204 ಭೋಧಕ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಡಿ ಅವರು ಕಳೆದ ಡಿಸೆಂಬರ್ 21 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆಸಿದ್ದ ಶಿಕ್ಷಣ ಇಲಾಖೆಯ ಸಮಸ್ಯೆಗಳ ಕುರಿತ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿತ್ತು. ಆ ಸಭೆಯ ನಡಾವಳಿಗಳನ್ನು ಆಧರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಶುಕ್ರವಾರ ಆದೇಶ ಹೊರಡಿಸಿದೆ.
2015 ಭೋಧಕ ಹುದ್ದೆಗಳು ಖಾಲಿ ಇದ್ದು, ಈ ಪೈಕಿ ಈಗಾಗಲೇ 114 ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಲಾಗಿತ್ತು. ಉಳಿದ 204 ಹುದ್ದೆಗಳನ್ನು ಆಯಾ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ನಿಯಮಾನುಸಾರ ಆಯ್ಕೆ ಪ್ರಕ್ರಿಯೆಯ ಎಲ್ಲ ಹಂತಗಳನ್ನು ಪೂರ್ಣಗೊಳಿಸಿರುವುದನ್ನು ಖತಪಡಿಸಿಕೊಂಡು ಹುದ್ದೆಗಳಿಗೆ ನೇಮಕಾತಿ ಆದೇಶಗಳನ್ನು 2022-23 ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾದ ನಂತರ ನೀಡಲು ಸರ್ಕಾರ ಅನುಮತಿ ನೀಡಿದೆ.
ಸರ್ಕಾರದ ಆದೇಶವನ್ನು ಸಭಾಪತಿ ಬಸವರಾಜ್ ಹೊರಟ್ಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ಅರುಣ್ ಶಹಾಪುರ ಸ್ವಾಗತಿಸಿದ್ದಾರೆ.
Leave a Comment