
ಯಲ್ಲಾಪುರ: ರಾಜಿ ಸಂಧಾನ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸುವ ಉದ್ದೇಶದಿಂದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಮೆಗಾ ಲೋಕ ಅದಾಲತ್ ದಲ್ಲಿಅವಕಾಶ ಕಲ್ಪಿಸಲಾಗಿದೆ ಎಂದು
,ಸಿವಿಲ್ ನ್ಯಾಯಾಧೀಶ ಎಚ್. ಓಂಕಾರಮೂರ್ತಿ ಹೇಳಿದರು.ಅವರು ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜೂನ್ 25 ರಂದು ನಡೆಯಲಿರುವ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಕುರಿತ ಪೂರ್ವಭಾವಿ ಸಭೆ ಯಲ್ಲಿ ಮಾತನಾಡಿ ಹೆಚ್ಚುತ್ತಿರುವ ಪ್ರಕರಣಗಳು ಹಾಗೂ ದೀರ್ಘ ಕಾಲದಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದ ಪ್ರಕರಣಗಳಿಂದಾಗಿ ಸಮಯ ಹಾಗೂ ಹಣ ವ್ಯರ್ಥವಾಗುತ್ತಿದೆ. ಹೀಗಾಗಿ ಎಲ್ಲರೂ ತಮ್ಮ ಕಕ್ಷಿದಾರರ ಮನವೊಲಿಸಿ, ಈ ಮೆಗಾ ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಹಣಕಾಸು ಸಂಸ್ಥೆಗಳು, ವಕೀಲರು, ಸರ್ಕಾರಿ ಇಲಾಖೆಗಳು ಸಹಕಾರ ನೀಡಬೇಕೆಂದರು.
ಸರ್ಕಾರಿ ಸಹಾಯಕ ಅಭಿಯೋಜಕಿ ಜೀನತ್ ಬಾನು ಶೇಖ್, ಪ್ಯಾನಲ್ ವಕೀಲರಾದ ಸರಸ್ವತಿ ಜೋಶಿ, ಬಿಬಿ ಅಮೀನಾ ಶೇಖ್, ಹಾಗೂ ವಿವಿಧ ಇಲಾಖಾ , ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
Leave a Comment