ಯಲ್ಲಾಪುರ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕಾ ಕಾನೂನು ಸೇವಾ ಸಮೀತಿ,ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ವಿಶ್ವ ಭೂಮಿ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು,ನೆರವು ಕಾರ್ಯಕ್ರಮ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಗುಡ್ಡಪ್ಪ ಬಸವಣೆಪ್ಪ ಹಳ್ಳಕಾಯಿ ಕಾರ್ಯಕ್ರಮ ಉದ್ಘಾಟಿಸಿಇರುವುದೊಂದೇ ಭೂಮಿಯನ್ನು ಮಾಲಿನ್ಯದಿಂದ ಸಂರಕ್ಷಿಸಿ,ಭೂಮಿಯ ಸ್ವಾಸ್ತ್ಯವನ್ನು ಕಾಯ್ದುಕೊಂಡು ಹೋಗಬೇಕು.ಆನಿಟ್ಟಿನಲ್ಲಿ ಸಾಮಾಜಿಕ ಜಾಗೃತಿ ಹೆಚ್ಚಿಸ ಬೇಕು” ಎಂದರು.
ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ಭಟ್ಟ ಭೂಮಿ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು.
ಸಿವಿಲ್ ನ್ಯಾಯಾಧೀಶ ಎಚ್.ಓಂಕಾರಮೂರ್ತಿ,ಸಹಾಯಕ ಸರಕಾರಿ ಅಭಿಯೋಜಕರಾದ ಪ್ರಸಾದ ಹೆಗಡೆ,ಝಿನತ್ ಭಾನು ಶೇಖ್,ಪ್ಯಾನಲ್ ವಕೀಲೆ ಬೇಬಿ ಅಮಿನಾ ಶೇಖ್ ಮುಂತಾದವರು ಭಾಗವಹಿಸಿದ್ದರು.
Leave a Comment