
ಯಲ್ಲಾಪುರ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಾಲೂಕಿನ ನಂದೊಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿ ವಿನಾಯಕ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ” ಹೆಬ್ಬಾರ್ ಟ್ರೋಫಿ ” ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕ್ರೀಡೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸಚಿವರು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಿ, ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಯುವನಾಯಕ ವಿವೇಕ್ ಹೆಬ್ಬಾರ್, ಪ್ರಮುಖರಾದ ಪ್ರಕಾಶ್ ಹೆಗಡೆ, ವಿಜಯ ಮಿರಾಶಿ, ಶ್ರೀ ಮುರಳಿ ಹೆಗಡೆ, ಶಿರಿಷ್ ಪ್ರಭು, ಡಾ.ರವಿ ಭಟ್ ಬರಗದ್ದೆ, ರವಿ ಕೈಟಕರ್ ತಾಲೂಕಾ ಪಂಚಾಯತ ಮಾಜಿ ಸದಸ್ಯರಾದ ಶ್ರೀ ನಾಗರಾಜ ಕವಡಿಕೆರೆ, ಗ್ರಾಮ ಪಂಚಾಯತ ಸದಸ್ಯರು, ಸ್ಥಳೀಯ ಪ್ರಮುಖರು, ಸಿದ್ಧಿ ವಿನಾಯಕ ಗೆಳೆಯರ ಬಳಗದ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
Leave a Comment