ಕಾರವಾರ : ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ 4 (2) ರ ಪ್ರಕಾರ (ತಿದ್ದುಪಡಿಯಂತೆ). ಪಾಲಿಸ್ಟೆçರೀನ್ ಮತ್ತು ವಿಸ್ತರಿತ ಪಾಲಿಸ್ಟೆçರೀನ್ ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 1 ರಂದು ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.
ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾಬರ್ಗಳು, ಪ್ಲಾಸ್ಟಿಕ್ ಬಂಟಿAಗ್ಸ್, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ಗಳು, ಪ್ಲಾಸ್ಟಿಕ್ ಸ್ಪೂನ್ಗಳು, ಅಂಟಿಕೊಳ್ಳುವ ಫಿಲ್ಮ್ಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟಾçಗಳು, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪತ್ನಗಳನ್ನು 2016 ರ ಮಾ. 11 ರಿಂದ ಈಗಾಲೇ ನಿಷೇಧಿಸಲಾಗಿದ್ದು, ಜೂನ್ 30 ರೊಳಗೆ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಶೂನ್ಯ ದಾಸ್ತಾನುಗಳನ್ನು ಖಚಿತಪಡಿಸಿಕೊಳ್ಳಲು ಸಂಬAಧಿಸಿದ ಘಟಕಗಳಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
ಮೇಲಿನ ಆದೇಶವನ್ನು ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳಾದ ಮಾಲ್, ಮಾರುಕಟ್ಟೆ ಸ್ಥಳ , ಶಾಪಿಂಗ್ ಕೇಂದ್ರಗಳು, ಸಿನಿಮಾ ಥಿಯೆಟ್ರ್, ಪ್ರವಾಸಿ ಸ್ಥಳಗಳು, ಶಾಲಾ ಕಾಲೇಜುಗಳು ಕಛೇರಿ, ಆಸ್ಪತ್ರೆ ಮತ್ತು ಇತರ ಸಂಸ್ಥೆಗಳು ಉಲ್ಲಂಘಿಸಿದರೆ ಪರಿಸರ (ಸಂರಕ್ಷಣೆ) ಕಾಯ್ದೆ, 1986 ರಡಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳುವ ಮತ್ತು ಅಂತಹ ಕೈಗಾರಿಕೆಗಳಿಗೆ ಮುಚ್ಚುವ ಆದೇಶವನ್ನು ನೀಡಲಾಗುವುದು ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಹೊರಡಿಸಿದ ಮಾರ್ಗಸೂಚಿಯ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಕಾರವಾರ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment