.
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಕರ್ನಾಟಕ ವಿಧಾನಸಭೆ ಸಚಿವಾಲಯ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 43
ವಿದ್ಯಾರ್ಹತೆ :
ವರದಿಗಾರರು : ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಫ್ರೌಢ ದರ್ಜೆಯ ಕನ್ನಡ ಬೆರಳಚ್ಚುಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕಂಪ್ಯೂಟರ್ ಆಪರೇಟರ್ : ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಬ್ಯಾಚುಲರ್ಸ್ ಪದವಿ (ಬಿ.ಸಿ.ಎ) ಅಥವಾ ಬಿ.ಎಸ್ಸಿ. ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟಾçನಿಕ್ಸ್ ಪದವಿ ಪಡೆದಿರಬೇಕು.
ಕಿರಿಯ ಸಹಾಯಕರು : ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪದವಿ ಹೊಂದಿರಬೇಕು. ಹಾಗೂ ಗಣಕಯಂತ್ರದ ಸಾಮಾನ್ಯ ಜ್ಞಾನ ಹೊಂದಿರಬೇಕು.
ಬೆರಳಚ್ಚುಗಾರರು : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿದವರಿಗೆ ಮತ್ತು ಮಾನ್ಯತೆ ಪಡೆದ ಸಂಸ್ಥೆಯಿAದ ಗಣಕಯಂತ್ರ ಕನಿಷ್ಠ 1 ವರ್ಷದ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಫ್ರೌಢ ದರ್ಜೆಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ದಲಾಯತ್ : 7 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ :
ಅಭ್ಯರ್ಥಿಗಳಿಂದ ಕನಿಷ್ಠ 18 ವರ್ಷ ನಿಗದಿಪಡಿಸಿದ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ಪ.ಪಂ/ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ
ವರದಿಗಾರರು ರೂ. 37900/- ರೂ. 70850/-
ಕಂಪ್ಯೂಟರ್ ಆಪರೇಟರ್ ರೂ. 37900/- ರೂ. 70850/-
ಕಿರಿಯ ಸಹಾಯಕರು ರೂ. 21400/- ರೂ. 42000/-
ಬೆರಳಚ್ಚುಗಾರರು ರೂ. 21400/- ರೂ. 42000/-
ದಲಾಯತ್ ರೂ. 17000/- ರೂ. 28950/-
ಅರ್ಜಿ ಶುಲ್ಕ :
ಪ.ಜಾತಿ, ಪ.ಪಂ ಹಾಗೂ ಪ್ರ 1 ರ ಅಭ್ಯರ್ಥಿಗಳಿಗೆ ಶುಲ್ಕ ಇರುವುದಲ್ಲ.
ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ ರೂ. 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕದಿAದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವAತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ಈ ವಿಳಾಸಕ್ಕೆ ಪಾವತಿ ಮಾಡಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 26/4/ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27/5/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification ;
Leave a Comment