ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಿದ್ದು 41,162 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 87 ಮಂದಿ ಶೇ. 100 ಕ್ಕೆ 100 ಅಂಕ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಅಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ 102 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇವರೊಂದಿಗೆ 2017 -18, 2018-19ರ 2+14=16 ಬ್ಯಾಕ್ ಲಾಗ್ ಹುದ್ದೆಗಳಿವೆ. ನೇಮಕಾತಿಗೆ ದ್ವೀತಿಯ ಪಿಯುಸಿಯ ಅಂಕ ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದೆ. ಮೇ 10 ರಂದು ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನಾಂಕ ಮುಕ್ತಾಯವಾಗಿದ್ದು, ಒಟ್ಟು 41,162 ಅರ್ಜಿಗಳು ಸಲ್ಲಿಕೆಯಾಗಿದೆ ಎಂದು ತಿಳಿಸಿದರು.
ಇದರಲ್ಲಿ 1:5 ರಂತೆ ಅಂದರೆ 102 ಹುದ್ದೆಗಳಿಗೆ 510 ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಕರೆಯುತ್ತೇವೆ. ಮೆರಿಟ್ ಆಧಾರದಲ್ಲಿ ತಂತ್ರಾಶದಿAದಲೇ ಈ ಅಭ್ಯರ್ಥಿಗಳ ಪಟ್ಟಿ ಸಿದ್ಧ ಗೊಳ್ಳಲಿದ್ದು, ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಸರ್ಕಾರದ ಅಂತಿಮ ಒಪ್ಪಿಗೆಗೆ ಕಳುಹಿಸಲಾಗುತ್ತದೆ. ಅಲ್ಲಿಂದ ನೇಮಕಾತಿ ಆದೇಶ ಬಂದ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಪ್ರಕ್ರಿಯೆ ಎಲ್ಲವೂ ಆನ್ ಲೈನ್ ಮೂಲಕ ಆಗುವ ಕಾರಣ ಪಾರದರ್ಶಕವಾಗಿ ಆಗಲಿದೆ. ಈ ಬಗ್ಗೆ ಯಾವುದೇ ಗೊಂದಲಗಳು ಬೇಡ ಎಂದರು.
ಕೋವಿಡ್ ಬ್ಯಾಚ್ ನ ವಿದ್ಯಾರ್ಥಿಗಳು ಅತಿಹೆಚ್ಚು ಮಾರ್ಕ್ಸ್ಗಳನ್ನು ಪಡೆದಿದ್ದು, ಇದಕ್ಕೆ ಇತರ ವರ್ಷಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ತಕರಾರಿದೆ. ಕೋವಿಡ್ ಬ್ಯಾಚ್ ವಿದ್ಯಾರ್ಥಿಗಳೇ ಮೆರಿಟ್ ಆಧಾರದಲ್ಲಿ ನೇಮಕಾತಿಯಾಗಲಿದ್ದಾರೆ ಎಂಬ ದೂರಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಸರ್ಕಾರದಿಂದ ಈ ಬಗ್ಗೆ ಸ್ಪಷ್ಟನೆಗೆ ಕೋರಿದ್ದೇವೆ. ಆದರೆ ಈವರೆಗಿನ ನಿಯಮಗಳ ಪ್ರಕಾರ ಯಾವುದೇ ಜಿಲ್ಲೆ, ಬ್ಯಾಚ್ ತಾರತಮ್ಯಗಳಿಲ್ಲ ಎಂದು ಹೇಳಿದರು.
Leave a Comment