ಕಾರವಾರ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಿಂದ 7, 8, 9ನೇ ತರಗತಿಗಳ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಹಾಗೂ ವಿಶೇಷ ವರ್ಗದ ವಿದ್ಯಾರ್ಥಿಗಳು ಆಯಾ ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರಿAದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಮೇ. 18 ರೊಳಗಾಗಿ ಪ್ರಾಂಶುಪಾಲರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 82773 40393, 944991 6292ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment