ಯಲ್ಲಾಪುರ : ವಸತಿ ಹಾಗೂ ನಿವೇಶನರಹಿತ ಬಡ ಕುಟುಂಬಗಳಿಗೆ ಸೂರು ಒದಗಿಸುವ ಉದ್ದೇಶದಿಂದ ಪಟ್ಟಣದ ಮಂಜುನಾಥ ನಗರದಲ್ಲಿ ಜೀ ಪ್ಲಸ್ ಟೂ ಮಾದರಿಯ ಆಶ್ರಮ ಮನೆಗಳ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿದೆ.
ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಸ್ಥಳಕ್ಕೆ ಭೇಟಿ ನೀಡಿ, ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಡೆಸಿ, ಅಧಿಕಾರಿಗಳಿಗೆ ಹಾಗೂ ಗುತ್ತಿಗೆ ಸಂಸ್ಥೆಯ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಚಿವರ ಧರ್ಮಪತ್ನಿ ಶ್ರೀಮತಿ ವನಜಾಕ್ಷಿ ಶಿವರಾಮ ಹೆಬ್ಬಾರ್, ಪ್ರಮುಖರಾದ ಶ್ರೀ ಗಣಪತಿ ಮುದ್ದೆಪಾಲ್, ಪಟ್ಟಣ ಪಂಚಾಯತ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಗುತ್ತಿಗೆ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Leave a Comment