ತುಮಕೂರು: ಪ್ರೀತಿಸಿ ಮದುವೆಯಾಗಲು ಸಿದ್ಧತೆ ನಡೆಸಿದ್ದ ಯುವ ಜೋಡಿ ದಾರುಣ ಅಂತ್ಯ ಕಂಡಿದ್ದಾರೆ. ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದ ಪ್ರಿಯತಮ ಅಪಘಾತದಲ್ಲಿಸಾವನ್ನಪ್ಪಿದ ಸುದ್ದಿ ಕೇಳಿ ಪ್ರಿಯತಮೆಯೂ ವಿಷ ಸೇವಿಸಿ ಜೀವ ಬಿಟ್ಟ ಘಟನೆ ತಾಲೂಕಿನ ಅರೆಹಳ್ಳಿಯಲ್ಲಿ ನಡೆದಿದೆ.
ಧನುಷ್ (23), ಸುಷ್ಮಾ (22) ಮೃತ ದುರ್ದೈವಿಗಳು. ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಹಾಗೂ ಅರೆಹಳ್ಳಿ ಗ್ರಾಮದ ಸುಷ್ಮಾ ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ಮನೆಯವರನ್ನೂ ಒಪ್ಪಿಸಿ ಸಪ್ತಪದಿ ತುಳಿಯುವ ಸಿದ್ಧತೆಯಲ್ಲಿದ್ದರು. ಆದರೆ ಮೇ 11ರಂದು ನೆಲಮಂಗಲ ಕುಲುವನಹಳ್ಳಿ ಬಳಿ ನಡೆದ ಅಪಘಾತದಲ್ಲಿ ಧನುಷ್ ಮೃತಪಟ್ಟಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಯುವತಿ ಸುಷ್ಮಾ, ಪ್ರಿಯಕರನ ಅಂತ್ಯಸAಸ್ಕಾರದಲ್ಲಿ ಭಾಗಿಯಾಗಿದ್ದಳು.
ಅಂದಿನಿAದಲೂ ಧನುಷ್ ಸಾವಿನ ಯೋಚನೆಯಲ್ಲಿಯೇ ದುಃಖಿಸುತ್ತಿದ್ದ ಸುಷ್ಮಾ, ಮೇ.14 ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಕುಟುಂಬಸ್ಥರು ನಾಲೈದು ಆಸ್ಪತ್ರೆಗಳಲ್ಲಿ ಸುತ್ತಿ ಚಿಕಿತ್ಸೆ ಕೊಡಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೇ.14 ರಂದು ರಾತ್ರಿ 8 ಗಂಟೆ ಸುಮಾರಿನಲ್ಲಿ ಸಾವನ್ನಪ್ಪಿದ್ದಾಳೆ. ಸುಷ್ಮಾ ಎ0ಕಾ0 ವಿದ್ಯಾಭ್ಯಾಸ ಮಾಡುತ್ತಿದ್ದಳು, ಧನುಷ್ ಬೆಂಗಳೂರಿ ನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ. ಪ್ರೀತಿ ವಿಚಾರ ಗೊತ್ತಾಗಿ ಮನೆಯವರು ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ಊರಿನ ಜಾತ್ರೆಗೆ ಬರುವ ವೇಳೆ ಅಪಘಾತ ನಡೆದು ಧನುಷ್ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕುರಿತಂತೆ ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Leave a Comment