ಕಾರವಾರ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಸಂಪನ್ಮೂಲ ಕೇಂದ್ರ ಯೋಜನೆಯಡಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ಮಹಿಳಾ ಸ್ವ-ಉದ್ಯೋಗ ಮಾರ್ಗದರ್ಶನ ಕೇಂದ್ರ ನಡೆಯುತ್ತಿದ್ದು, 11 ತಿಂಗಳ ಅವಧಿಗಾಗಿ (ತಾತ್ಕಾಲಿಕ) ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ 21ರಿಂದ 50 ವರ್ಷದೊಳಗಿನ ಅಭ್ಯರ್ಥಿಯು ತಮ್ಮ ಸ್ವ ವಿವರ, ಒಪ್ಪಿಗೆ ಪತ್ರ ಹಾಗೂ ಸೂಕ್ತ ದಾಖಲೆ ಪತ್ರಗಳ ಜೊತೆಗೆ ಜೂನ್ 9ರೊಳಗಾಗಿ ತಮ್ಮ ಅರ್ಜಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಅಭ್ಯರ್ಥಿಯು ಎಂ.ಎಸ್.ಡಬ್ಲ್ಯೂ ಅಥವಾ ಮಹಿಳಾ ಅಧ್ಯಯನ ಅಥವಾ ಸೋಶಿಯಾಲಜಿ ಇವುಗಳಲ್ಲಿ ಯಾವುದಾದರು ಒಂದರಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು, ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಟ 3 ರಿಂದ 5 ವರ್ಷಗಳ ಕಡ್ಡಾಯವಾಗಿ ಅನುಭವ ಹೊಂದಿದ ಪ್ರಮಾಣ ಪತ್ರ ಸಲ್ಲಿಸಬೇಕು, ಜಿಲ್ಲೆಯ ಎಲ್ಲಾ ತಾಲೂಕಗಳಿಗೆ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಾಮರ್ಥ್ಯ ಹೊಂದಿರಬೇಕು. ಗೌರವಧನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382- 226 761, 226 142 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ತಿಳಿಸಿದ್ದಾರೆ. ಉಪನಿರ್ದೇಶಕ ಪ್ರಕಟಣೆಯಲ್ಲಿ
Leave a Comment