ಕಾರವಾರ : ಮಾದಕ ವಸ್ತು ಮುಕ್ತ ಕರ್ನಾಟಕ ಡಿಯಲ್ಲಿ ಸಿಗರೇಟ್ ಹಾಗೂ ಇತರೆ ತಂಬಾಕು ನಿಷೇಧ ಕಾಯ್ದೆ ಅನ್ವಯ ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸ್ಥಳದಲ್ಲಿ ಸಿಗರೇಟ್ ಸೇದುವುದು ಹಾಗೂ ತಂಬಾಕು ಉತ್ಪನ್ನಗಳನ್ನು ಜಾಹೀರುಪಡಿಸುವುದು ಮತ್ತು ಪ್ರಾಯೋಜಿಸುವುದನ್ನು ನಿಷೇಧಿಸಲಾಗಿದೆ.
ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದುವ ವ್ಯಕ್ತಿಗೆ ಹಾಗೂ 18 ವರ್ಷಕ್ಕಿಂತ ಕೆಳಗಿನವರು ತಂಬಾಕು ಉತ್ಪನ್ನಗಳನ್ನು ಮಾರಾಟ ಹಾಗೂ ಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತ 100 ಗಜಗಳ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ 200 ರೂ. ದಂಡ ಮತ್ತು ತಂಬಾಕು ಉತ್ಪನ್ನಗಳನ್ನು ಜಾಹೀರುಪಡಿಸುವ ವ್ಯಕ್ತಿಗೆ 1000 ರಿಂದ 5000 ರೂ. ವರೆಗೆ ದಂಡ ಹಾಗೂ 2 ವರ್ಷದಿಂದ 5 ವರ್ಷದವರೆಗೆ ಶಿಕ್ಷೆ ವಿಧಿಸಲಾಗುವುದು ಎಂದು ನಗರಸಭೆ ಪೌರಾಯಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment