ಕಾರವಾರ : 2022 -23 ನೇ ಸಾಲಿನ ವಿದ್ಯಾರ್ಥಿಗಳ ಬಸ್ ಪಾಸಗಾಗಿ ಸೇವಾ ಸಿಂಧು ಆನ್ ಲೈನ್ ಪೊರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಾದ್ಯಂತ ಗ್ರಾಮ ಒನ್ ಕೇಂದ್ರಗಳು ಆರಂಭವಾಗಿದ್ದು, ಈ ಕೇಂದ್ರಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯೂ ಶಿರಸಿ, ಕುಮಟಾ, ಕಾರವಾರ, ಭಟ್ಕಳ, ಅಂಕೋಲಾ, ಹಾಗೂ ಯಲ್ಲಾಪುರ ಘಟಕಗಳ ಶಾಲಾ ಕಾಲೇಜು ವಿದ್ಯಾರ್ಥಿಗಳು ರಿಯಾಯಿತಿ ಬಸ್ ಪಾಸಾಗಾಗಿ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08384- 235272 ಗೆ ಸಂಪರ್ಕಿಸಿ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment