
ಯಲ್ಲಾಪುರ: ಪ್ರತಿ ಚುನಾವಣೆಯಲ್ಲಿ ನನಗೆ ಬಿಜೆಪಿ ಎದುರಾಳಿಯಾಗಿತ್ತು. ಈ ಸಲ ನಾನು ಬಿಜೆಪಿಗೆ ಬಂದಿದ್ದರಿಂದ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಪಟ್ಟಣದ ಸರಕಾರಿ ಹೈಸ್ಕೂಲ್, ವೈಟಿಎಸ್ಎಸ್, ವಿಶ್ವದರ್ಶನ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತ ಯಾಚಿಸಿ ನಂತರ ಮಾತನಾಡಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ42 ವರ್ಷದಿಂದಶಾಸಕನಾಗಿ ಕೆಲಸಮಾಡಿದ್ದೇನೆ. ಈವರೆಗೆ ಶಿಕ್ಷಕರ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.

ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಮಾತನಾಡಿದರು. ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ, ಮಂಡಳದ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ, ಬೆಂಗಳೂರು ಬೇಸ್ ಅಕಾಡೆಮಿ ಸಂಸ್ಥಾಪಕ ಎಚ್.ಎಸ್.ನಾಗರಾಜ, ಮಂಡಳದ ಉಪಾಧ್ಯಕ್ಷ ಶಿರೀಷ ಪ್ರಭು, ಕಾರ್ಯದರ್ಶಿ ಪ್ರಸಾದ ಹೆಗಡೆ, ಖಜಾಂಚಿ ಮುರಳಿ ಹೆಗಡೆ, ನಿವೃತ್ತ ಪ್ರಾಂಶುಪಾಲಬೀರಣ್ಣ ನಾಯಕ ಮೊಗಟಾ, ಮಹಿಳಾ ಮೋರ್ಚಾ ಸದಸ್ಯೆ ರಜನಿ ಚಂದ್ರಶೇಖರ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ದಾಕ್ಷಾಯಿಣಿ ಹೆಗಡೆ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
Leave a Comment