ಕಾರವಾರ : ಕುಮಟಾ ತಾಲೂಕಿನ ನಾಡುಮಾಸ್ಕೇರಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಆಂಗ್ಲ ಮಾಧ್ಯಮ ಶಾಲೆಗೆ 2022-23ನೇ ಸಾಲಿನ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆ ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಭೊಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜೂ. 15 ರೊಳಗಾಗಿ ತಮ್ಮ ಸ್ವವಿವರ ಮತ್ತು ವಿದ್ಯಾರ್ಹತೆಯು ದಾಖಲೆಗಳನ್ನು ಲಗತ್ತಿಸಿ ವಸತಿ ಶಾಲೆಯ ಕಚೇರಿಗೆ ಸಲ್ಲಿಸಬೇಕು.
ಆಯ್ಕೆಯಾದ ಶಿಕ್ಷಕರುಗಳಿಗೆ ಮಾಸಿಕ 10 ಸಾವಿರ ರೂಪಾಯಿಗಳ ಗೌರವಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕಿತ್ತೂರು ರಾಣಿ ಚೆನ್ನಮ್ಮ ವಸತಿಶಾಲೆ ರಾಮನಗರ ಮೊಬೈಲ್ ಸಂಖ್ಯೆ : 94801 43053, 91484 22636 ಗೆ ಸಂಪರ್ಕಿಸಬಹುದಾಗಿದೆ. ಎಂದು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment