ಕಾರವಾರ: ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ನವದೆಹಲಿ ಪ್ಲಾಸ್ಟಿಕ್ ನಿರ್ವಹಣೆ (ತಿದ್ದುಪಡಿ) ನಿಷೇಧಿತ ಉತ್ಪನ್ನಗಳ ಜೊತೆಗೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಜುಲೈ 1 ರಿಂದ ರಿಂದ ಜಾರಿಗೆ ಬರುವಂತೆ ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಅಧಿಸೂಚನೆಯಡಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ, ಬ್ಲಾಗ್, ಪ್ಲಾಸ್ಟಿಕ್ ಬ್ಯಾನಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಪ್ಲೆಕ್ಸ್, ಪ್ಲಾಸಿಕ್ ಪ್ಲೇಟ್ಗಳು, ಕಪ್ಗಳು ಮತ್ತು ಲೋಟಗಳು, ಪೋರ್ಕ್ ಗಳು, ಚಾಕುಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ಗಳು, ಪ್ಲಾಸ್ಟಿಕ್ ಸ್ಪೂನ್ಗಳು, ಅಂಟಿಕೊಳ್ಳುವ ಫಿಲ್ಗಳು, ಪ್ಲಾಸ್ಟಿಕ್ ಸ್ಟಿಕ್ಗಳೊಂದಿಗೆ ಇಯರ್ ಬಡ್ಗಳು, ಬಲೂನ್ಗಳಿಗೆ ಬಳಸುವ ಪ್ಲಾಸ್ಟಿಕ್ ಸಿಕ್ಗಳು, ಪ್ಲಾಸ್ಟಿಕ್, ಕ್ಯಾಂಡಿ, ಸ್ಪಿಕ್ಗಳು, ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್ಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಪಾಗಳು, ಥರ್ಮಾಕೋಲ್, ಪ್ಲಾಸ್ಟಿಕ್ ಟ್ರೇಗಳಂತಹ ಕಟ್ಟರಿಗಳು, ಸಿಟ್ ಬಾಕ್ಸ್ಗಳ ಸುತ್ತ ಸುತ್ತುವ ಅಥವಾ ಪ್ಯಾಕಿಂಗ್ ಫಿಲ್ಸ್ಗಳು, ಅಮಂತ್ರಣ ಪತ್ರಗಳು ಮತ್ತು ಸಿಗರೇಟ್ ಪ್ಯಾಕೆಟ್ಗಳು, 100 ಮೈಕ್ರಾನ್ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಅಥವಾ ಪಿ.ವಿ.ಸಿ ಬ್ಯಾನರ್ಗಳು, ಪ್ಲಾಸ್ಟಿಕ್ ಸ್ಥಿರರ್ಗಳು ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ನಿಷೇಧಿಸಲಾಗಿದೆ.
ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳನ್ವಯ ಪಾಲಿಸ್ಟರೀಸ್ ಮತ್ತು ವಿಸ್ತರಿತ ಪಾಲಿಸೈನ್, ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್ (ಎಸ್. ಯು.ಸಿ) ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ ಮಾರಾಟ ಮತ್ತು ಬಳಕೆಯನ್ನು ಜುಲೈ 1ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ಟೈಮ್ ಲೈನ್ಗಳ ಪ್ರಕಾರ ಪ್ಲಾಸ್ಟಿಕ್ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿಗಳು,
ಅಂಗಡಿ ಮಾಲೀಕರುಗಳು, ಇ-ಕಾಮರ್ಸ್ ಕಂಪನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳಾದ ಮಾಲ್ಗಳು, ಮಾರುಕಟ್ಟೆ ಸ್ಥಳ, ಶಾಪಿಂಗ್ ಕೇಂದ್ರಗಳು, ಸಿನಿಮಾ ಮನೆಗಳು, ಪ್ರವಾಸೋದ್ಯಮ ಸ್ಥಳಗಳು, ಶಾಲೆಗಳು, ಕಾಲೇಜುಗಳು, ಕಛೇರಿ ಸಂಕೀರ್ಣಗಳು, ಆಸತ್ರೆಗಳು, ಇತರೆ ಸಂಸ್ಥೆಗಳು ಮತ್ತು ಸಾಮಾನ್ಯ ಸಾರ್ವಜನಿಕರಿಗೆ ಏಕ ಬಳಕೆಯ, ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಲ್ಲಿಸುವಂತೆ ಸೂಚನೆ ನೀಡಲಾಗಿದ್ದು, ತಪ್ಪಿದ್ದಲ್ಲಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಹೊರಡಿಸಿದ ಮಾರ್ಗಸೂಚಿಯ ಪ್ರಕಾರ ಪತಿ ಟನ್ಗೆ ರೂ 5,000 ಗಳಂತೆ ಪರಿಸರ ಪರಿಹಾರ ಎಂದು ದಂಡ ವಿಧಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರ ಒಳ ಉಡುಪಿನಲ್ಲಿ ಚಿನ್ನ ಸಾಗಾಟಕ್ಕೆ ಯತ್ನ ; ಕಸ್ಟಮ್ಸ್ ತಂಡದಿಂದ ಭಟ್ಕಳ ಮೂಲದ ವ್ಯಕ್ತಿ ಬಂಧನ
Leave a Comment