ಕಾರವಾರ : ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದ್ದು, ಸಿದ್ದಾಪುರದಲ್ಲಿ ಮರ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ.
ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟು ಬಿಟ್ಟು ಭಾರೀ ಮಳೆಯಾಗುತ್ತಿದೆ. ಮಲೆನಾಡಿನ ಸಿದ್ದಾಪುರ, ಶಿರಸಿ, ಯಲ್ಲಾಪುರ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಸಿದ್ದಾಪುರದ ಶಿವಳಮನೆಯ ಅಬ್ಬಿಗದ್ದೆಯಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಗಾಳಿ ಮಳೆಗೆ ಮರ ಬಿದ್ದು ಶ್ರೀಧರ ನಾರಾಯಣ ಹೆಗಡೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪಟ್ಟಣದ ಅಯ್ಯುಪ್ಪಸ್ವಾಮಿ ದೇವಾಲಯದ ಹತ್ತಿರ ಮರ ವಿದ್ಯತ್ ಕಂಬ, ಓಮಿನಿ ಕಾರಿನ ಮೇಲೆ ಬಿದ್ದಿದೆ. ಓಮಿನಿಯಲ್ಲಿದ್ದ ಮಗುವೊಂದಕ್ಕೆ ಸ್ವಲ್ಪ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
Leave a Comment