ಬೆಂಗಳೂರು:ರಾಜ್ಯದಲ್ಲಿ ಈ ವರ್ಷ 2,000 ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ತುರ್ತು ಸಂದರ್ಭದಲ್ಲಿ ಜನರ ರಕ್ಷಣೆ ಮಾಡಲು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ಆದ್ಯತೆಯ ಮೇರೆಗೆ ಈ ವರ್ಷ 2000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಹಲವಾರು ಸಂದರ್ಭದಲ್ಲಿ ಗಲಭೆ, ದೊಂಬಿ ಮತ್ತಿತರ ಸಂಘರ್ಷಗಳು ನಡೆಯುತ್ತವೆ. ಇದರ ಜೊತೆಗೆ ಪ್ರಕೃತಿ ವಿಕೋಪದಂತಹ ಘಟನೆಗಳೂ ಜರುಗುತ್ತವೆ. ಇಂತಹ ಸಂದರ್ಭದಲ್ಲಿ ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು. ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರಕಾರ ವಿಶೇಷ ಆದ್ಯತೆ ನೀಡುತ್ತದೆ, ಹಾಗೂ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Leave a Comment