ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಕಾರ್ಯಕ್ರಮ ಅನುಷ್ಠಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕರ್ನಾಟಕದ ಕ್ರೀಡಾಪಟುಗಳು ವಿವರಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಅರ್ಜಿಗಳನ್ನು ಜು.14ರೊಳಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ಕಚೇರಿಯಿಂದ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಮೊಬೈಲ್ ಸಂಖ್ಯೆ: 94808 86551ಗೆ ಅಥವಾ [email protected]ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment