ಬೆಂಗಳುರು : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಕುಳಿತುಕೊಳ್ಳುವ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯು ಕಾರ್ಯ ನಿರ್ವಹಿಸಲು ನಿಗದಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಫ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ.
ಕೋವಿಡ್ ಹಿನ್ನಲೆಯಲ್ಲಿ 2020 – 21 ಸಾಲಿನ ಶೈಕ್ಷಣಿ ವರ್ಷದಲ್ಲಿ ಶಾಲೆಗಳು ಜನವರಿಯಲ್ಲಿ ಪ್ರಾರಂಭವಾಗಿದ್ದರೂ ಸಹ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದನ್ನು ಕಡ್ಡಾಯಗೊಳಿಸಿರಲಿಲ್ಲ. ಈ ಸಂಬAಧ ರಾಜ್ಯದಲ್ಲಿ 2020 -21ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿ ಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿತ್ತು.
ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಲಾಗಿದೆ.
Leave a Comment