ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಯನ್ನು ವೆಬ್ಸೈಟ್ನಲ್ಲಿ ಪಡೆದುಕೊಳ್ಳಬಹುದಾಗಿದೆ.
ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಇತ್ತೀಚಿಗೆ ಪ್ರಕಟಗೊಂಡಿತ್ತು. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಗೊಂಡ ನಂತ್ರ ಉತ್ತರ ಪತ್ರಿಕೆಯ ನಕಲು ಪ್ರತಿಗಾಗಿಯೂ ಅರ್ಜಿ ಸಲ್ಲಿಸಿದ್ದರು.
ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ವೆಬ್ ಸೈಟ್ನಲ್ಲಿ ಇದೀಗ ಪ್ರಕಟಿಸಲಾಗಿದೆ. ಈ ಪ್ರತಿಗಳನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಮಾಹಿತಿ ಯನ್ನು ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕವು ತಿಳಿಸಲಾಗುತ್ತದೆ. ಸಂದೇಶ ಬಂದ ಬಳಿಕ, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು
https://pue. karnataka.gov.in ನಲ್ಲಿ ಡೌನ್ ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
Leave a Comment