ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಅಡುಗೆ ಎಣ್ಣೆಗಳ ದರದಲ್ಲಿ ಪ್ರತಿ ಲೀಟರ್ ಗೆ 15 ರೂಪಾಯಿ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಪಾದ ತೈಲಗಳ ಗರಿಷ್ಠ ಚಿಲ್ಲರೆ ಬೆಲೆಯಲ್ಲಿ 15 ರೂಪಾಯಿಗಳ ಕಡಿತವನ್ನು
ಖಚಿತಪಡಿಸಿಕೊಳ್ಳಲು ಪ್ರಮುಖ ತೈಲ ಸಂಘಗಳಿಗೆ ನಿರ್ದೇಶನ ನೀಡಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಶುಕ್ರವಾರ ತಿಳಿಸಿದೆ. ಈ ಆದೇಶ ತಕ್ಷಣ ಜಾರಿಗೆ ಬರಬೇಕು ಎಂದು ಸೂಚನೆ ನೀಡಿದೆ.
Leave a Comment