ಹೊನ್ನಾವರ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 16 ರಂದು ಮಧ್ಯಾಹ್ನ 3ಕ್ಕೆ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಕ್ಷೇಮ ನಿಧಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸುವರು.
ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ದಿನಕರ ಶೆಟ್ಟಿ ಮತ್ತು ಸುನೀಲ್ ನಾಯ್ಕ ಪಾಲ್ಗೊಳ್ಳುವರು. ಪಪಂ ಅಧ್ಯಕ್ಷ ಶಿವರಾಜ ಮೇಸ್ತ ಉಪಸ್ಥಿತರಿರುವರು. ಹಿರಿಯ ಪತ್ರಕರ್ತರು ಹಾಗೂ ಕಾರ್ಯನಿರತ ಪತ್ರಕರ್ತ ಸಂಘದ ಗೌರವಧ್ಯಕ್ಷರಾದ ಜಿ.ಯು.ಭಟ್ ಉಪನ್ಯಾಸ ನೀಡಲಿದ್ದಾರೆ. ಸಂಘದ ಜಿಲ್ಲಾ ಕಾರ್ಯಕರಣಿ ಸದಸ್ಯರಾದ ಎಚ್.ಎಂ. ಮಾರುತಿ ವೇದಿಕೆಯಲ್ಲಿ ಉಪಸ್ಥಿತರಿರುವರು.
ಹಿರಿಯ ಪತ್ರಕರ್ತ ಸತೀಶ ತಾಂಡೇಲ್ ಮತ್ತು ಪತ್ರಿಕೆ ವಿತರಕ ಪ್ರಶಾಂತ ಶೇಟ್ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment