ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಶನಿವಾರ 18 ರಿಂದ 59 ವರ್ಷದೊಳಗಿನವರಿಗೆ ಕೋವಿಡ್ – 19 ಬೂಸ್ಟರ್ ಡೋಸ್ ಲಸಿಕಾಕರಣ ” ಕೋವಿಡ್ ಲಸಿಕೆ ಅಮೃತ ಮಹೋತ್ಸವಕ್ಕೆ ” ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ಜುಲೈ 15ರಿಂದ 75 ದಿನಗಳ ಕಾಲ ಆಜಾದ್ ಕಿ ಅಮೃತ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳುತ್ತಿದ್ದು 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರು ಕೋವಿಡ್ ಲಸಿಕೆಯನ್ನು ಪಡೆಯುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕಾ ವೈದ್ಯಾಧಿಕಾರಿ ಡಾ.ನರೇಂದ್ರ ಪವಾರ, ಪಟ್ಟಣ ಪಂಚಾಯತ ಸದಸ್ಯರಾದ ಶ್ರೀ ಅಮಿತ್ ಅಂಗಡಿ, ವೈದ್ಯಕೀಯ ಸಿಬ್ಬಂದಿಗಳು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment