ಶಿರಸಿ-ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಇಂದು ಶಿರಸಿಯಲ್ಲಿ ಸಮಾಜ ಸೇವಕರು ,ಜೀವ ಜಲ ಪಡೆ ಅಧ್ಯಕ್ಷರು ಆದ ಶ್ರೀ ಶ್ರೀನಿವಾಸ ಹೆಬ್ಬಾರ್ ಅವರನ್ನು ಸನ್ಮಾನಿಸುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಈ ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಸೀತಾರಾಂ ಆಚಾರ್ಯ ಅವರು ಮಾತನಾಡಿ ಶ್ರೀ ಶ್ರೀನಿವಾಸ ಹೆಬ್ಬಾರ್ ಅವರ ಜೀವ ಜಲ ಪಡೆ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ ಮತ್ತು ಬಡವರ ಪಾಲಿನ ಕೊಡಗೈ ದಾನಿಯಾಗಿ ಸಮಾಜ ಸೇವೆಯಲ್ಲಿ ತಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಇಂತಹ ಮಹಾನ್ ಸಮಾಜ ಸೇವಕರನ್ನು ಗುರುತಿಸಿ ಇಂದು ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಸಮಿತಿಯಿಂದ ಪತ್ರಿಕಾ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದು ತಿಳಿಸಿದರು. ಇದೆ ಸಂದರ್ಭದಲ್ಲಿ ಕುಮಟಾದ ಹೇಗೆಡೆಯಲ್ಲಿ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಜಿಲ್ಲೆಯ ನೇರ ನಡೆ ನುಡಿಯ ಪ್ರಾಮಾಣಿಕ ಪತ್ರಕರ್ತ ವಿನಾಯಕ ಭಟ್ ಬ್ರಹಮ್ಮುರೂ ಅವರಿಗೆ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಸಂತಾಪ ಸೂಚಿಸಲಾಯಿತು.
ಸಮಾಜ ಸೇವಕರಾದ ಶ್ರೀ ಶ್ರೀನಿವಾಸ ಹೆಬ್ಬಾರ ಅವರಿಗೆ ಅವರ ಮನೆಯಲ್ಲಿ ಫಲ ಪುಷ್ಪ ಮತ್ತು ಸರಣಿಕೆ ನೀಡಿ ಶಾಲು ಹೋದೆಯಿಸಿ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಆಚಾರ್ಯ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಅಕ್ಷಯ್ ಶೇಟ್, ಜಿಲ್ಲಾ ಸಮಿತಿ ಸದಸ್ಯ ರಮೇಶ್, ಸಂದೀಪ್, ರಫೀಕ್, ವಕೀಲರಾದ ಪ್ರದೀಪ್ ಗೌಡ ಮುಂತಾದವರು ಉಪಸ್ಥಿತರಿದ್ದರು.
Leave a Comment