ಬೆಂಗಳೂರು : ಚಾಲಕರ ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ಪದೇ ಪದೇ ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಅವರು, ಈ ಹಿಂದಿನ ಆದೇಶವನ್ನು ಪಾಲನೆ ಮಾಡದೆ, ವಾಹನ ಚಾಲಕರಿಗೆ ಅನಗತ್ಯವಾಗಿ ತೊಂದರೆ ಕೊಟ್ಟರೆ, ಅಂತಹವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೆ ಈ ಆದೇಶ ಅನ್ವಯವಾಗಲಿದೆ.ಇದರ ಅನ್ವಯ ಮಧ್ಯಪಾನ ಸೇವಿಸಿ ಯಾರಾದರೂ ವಾಹನ ಚಾಲನೆ ಮಾಡುವುದು ಕಂಡು ಬಂದರೆ ಅಂತಹ ವಾಹನಗಳನ್ನು ತಡೆದು ತಪಾಸಣೆ ನಡೆಸಬೇಕು. ಉಳಿದಂತೆ ದಾಖಲೆಗಳ ಪರಿಶೀಲನೆ ನೆಪದಲ್ಲಿ ಸಾರ್ವಜನಿಕರಿಗೆ ಪದೇ ಪದೇ ತೊಂದರೆ ಕೊಟ್ಟರೆ, ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ಕೊಟ್ಟಿದ್ದಾರೆ.
ರಸ್ತೆಯಲ್ಲಿ ಪೊಲೀಸರು ದಿಢೀರನೇ ವಾಹನ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಮತ್ತು ಪೊಲೀಸರ ತಪಾಸಣೆಗೆ ಬೆದರಿ ವಾಹನ ಸವಾರರು ತಪ್ಪಿಸಿಕೊಳ್ಳವ ಯತ್ನದಲ್ಲಿ ಅಪಘಾತವಾಗುತ್ತವೆ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬಂದಿದ್ದರಿAದ ಈ ಕ್ರಮ ತೆಗೆದುಕೊಳ್ಳಲಾಗಿತ್ತು ಆದರೂ, ಕೆಲವು ಪೊಲೀಸರು ಈ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ವಾಹನಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದರು. ಇದರಿಂದ ಬೇಸತ್ತ ಸಾರ್ವಜನಿಕರು ಗೃಹ ಸಚಿವರಿಗೆ ದೂರು ನೀಡಿದ್ದರು.
Leave a Comment