ಭಟ್ಕಳ: ಮಗಳನ್ನು ಪರೀಕ್ಷೆ ಕರೆದುಕೊಂಡು ಮರಳಿ ಊರಿಗೆ ಬರುವ ವೇಳೆ ಕಾರು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಸೇತುವೆಗೆ ಢಿಕ್ಕಿ ಹೊಡೆದು ತಂದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಭಟ್ಕಳದ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಜೋಸೆಫ್ ಕುಟ್ಟಿ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಮೃತ ವ್ಯಕ್ತಿಯ ಮಗಳಾದ ಅನು ಮರಿಯಾ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ತನ್ನ ಮಗಳನ್ನು ನಿಟ್ ಪರೀಕ್ಷೆ ಸಂಬಂದ ಮಂಗಳೂರಿಗೆ ಕರೆದುಕೊಂಡು ಹೋಗಿ ಪರೀಕ್ಷೆ ಮುಗಿಸಿ ಬರುವ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
Leave a Comment