ಕಾರವಾರ : ಉತ್ತರಕನ್ನಡ ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಗಳಲ್ಲಿ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನದಲ್ಲಿ ತಾತ್ಕಾಲಿಕವಾಗಿ ಖಾಲಿ ಇರುವ ಲೋಡರಸ್ ಮತ್ತು ಕ್ಲೀನರ್ ಗಳ ಹುದ್ದೆಗಳಿಗೆ ಕರ್ನಾಟಕ ಪುರಸಭೆಗಳ ನಿಯಮಗಳು 2021ರ ನಿಯಮಗಳಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈಗಾಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಅಭ್ಯರ್ಥಿಗಳು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಬೇಕು, ಅರ್ಜಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ನೇರವಾಗಿ ಸಲ್ಲಿಸಿ ನಿಗದಿತ ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸಿ ಸ್ವೀಕೃತಿ ಪಡೆಯಬೇಕು, ಅರ್ಜಿಯಲ್ಲಿ ಕೋರುವ ಎಲ್ಲ ಮೀಸಲಾತಿ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ, ಅಧಿಸೂಚನೆಯ ಅನುಬಂಧದಲ್ಲಿರುವ ನಮೂನೆಳಲ್ಲಿಯೇ ಕಡ್ಡಾಯವಾಗಿ ಪಡೆದಿಟ್ಟುಕೊಂಡಿರತಕ್ಕದ್ದು.
ಹಾಗೂ ಆಗಸ್ಟ್ 18 ರೊಳಗಾಗಿ ಸಂಬAಧ ಪಟ್ಟ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382 – 221170 ಸಂಪರ್ಕಿಸಿ ಅಥವಾ http://uttarakannada.nic.in/ ವೆಬ್ ಸೈಟ್ ನಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Leave a Comment