ಯಲ್ಲಾಪುರ : ತಾಲ್ಲೂಕಿನ ಇಡಗುಂದಿ ಗ್ರಾಮ ಪಂಚಾಯತನ ಗ್ರಾಮ ಸಭೆಯಲ್ಲಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಮಾತನಾಡಿ, ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯತೆ ಮತ್ತು ಸಂಪರ್ಕ ಚೆನ್ನಾಗಿ ಇದ್ದರೆ ಸರ್ಕಾರದ ಎಲ್ಲಾ ಯೋಜನೆಗಳು ಯಶಸ್ವಿಯಾಗಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅತೀ ಹತ್ತಿರ ಇರುವ ಗ್ರಾಮ ಪಂಚಾಯತ ಸಿಬ್ಬಂಧಿಗಳು ಹಾಗೂ ಪಂಚಾಯತ ಜನಪ್ರತಿನಿಧಿಗಳು ಕೆಲಸ ಮಾಡಬೇಕು ಎಂದರು.
ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಅನೇಕ ವಿಷಯಗಳ ಸುದೀರ್ಘ ಚರ್ಚೆಯಾಯಿತು. ಈ ಸಂದರ್ಭದಲ್ಲಿ ಇಡಗುಂದಿ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ನೋಡಲ್ ಅಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿ ಪ್ರಸಾದ್ ಪೆಡ್ನೇಕರ್, ಪಂಚಾಯತ ಅಭಿವೃದ್ಧಿ ಅಧಿಕಾರಿ ಚನ್ನವೀರ, ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು, ಮತ್ತಿತರರು ಉಪಸ್ಥಿತರಿದ್ದರು.
Leave a Comment