ಹೊನ್ನಾವರ : ಜಿಲ್ಲೆಯಲ್ಲಿ ತಿಂಗಳ ಅಂತ್ಯದೊಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಮುಖ್ಯಂಮAತ್ರಿಯೊAದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭರವಸೆ ನೀಡಿದರು.
ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗೆ ಕರೆದೊಯ್ಯುವಾಗ ಈ ಘಟನೆ ನಡೆದಿರುವುದು ದುರಂತ ಹಾಗೂ ನೋವಿಗೆ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈಗಾಗಲೇ ಜಿಲ್ಲಾಧಿಕಾರಿಯವರೊಂAದಿಗೆ ಮಾತುಕತೆ ನಡೆಸಿದ್ದೇನೆ.
ಜಿಲ್ಲೆಯ ಹೃದಯ ಭಾಗವಾಗಿರುವ ಕುಮಟಾದಲ್ಲಿ 15 ರಿಂದ 20 ಎಕರೆ ಜಾಗ ಕಾಯ್ದಿರಿಸಲಾಗಿದೆ. ತಿಂಗಳಾದ್ಯAತದಲ್ಲಿ ಜಿಲ್ಲೆಯ ಶಾಸಕರು. ಸಚಿವರೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಿದ ಬಳಿಕ ತೀರ್ಮಾನ ಪ್ರಕಟಿಸಲಾಗುವುದು. ಸರ್ಕಾರಿ ಅಥವಾ ಖಾಸಗಿ ಸಹಬಾಗಿತ್ವದಲ್ಲಿ ನಡೆಯಲಿದೆಯೆ ಎನ್ನುವುದು ಆ ಬಳಿಕ ನಿರ್ಧಾರವಾಗಲಿದೆ ಎಂದರು.
Leave a Comment